ನವದೆಹಲಿಯಲ್ಲಿ ಅಗ್ನಿ ದುರಂತ ಕೇಸ್: ಮೃತರ ಸಂಖ್ಯೆ 43ಕ್ಕೆ ಏರಿಕೆ: ಪ್ರಧಾನಿ ಮೋದಿ ಸಂತಾಪ….

ನವದೆಹಲಿ, ಡಿ,8,2019(www.justkannada.in):  ನವದೆಹಲಿಯ ರಾಣಿ ಝಾನ್ಸಿ ರಸ್ತೆಯ, ಆಂಜ್ ಮಂಡಿ ಪ್ರದೇಶದದಲ್ಲಿ ಸಂಭವಿಸಿರುವ  ಅಗ್ನಿ ಅನಾಹುತದಲ್ಲಿ ಮೃತಪಟ್ಟವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದು 50ಕ್ಕೂ ಹೆಚ್ಚು ಮಂದಿಯನ್ನ ರಕ್ಷಿಸಿದ್ದಾರೆ. ಹಲವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಸ್ಥಳಕ್ಕೆ ಎನ್ ಡಿಆರ್ ಎಫ್ ತಂಡ ಸಹ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ಅಗ್ನಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಪ್ರಧಾನಿ ಮೋದಿ, ಅಗ್ನಿ ದುರಂತ ಭಯಾನಕವಾಗಿದೆ. ಮೃತರ ಆತ್ಮಕ್ಕೆ ಶಾಂತಿಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ. ಹಾಗೆಯೇ ಕಾಂಗ್ರೆಸ್ ನಾಯಕ ಸಹ ಮೃತಪಟ್ಟವರಿಗೆ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿದ್ದಾರೆ.

Key words: Fire  accident-New Delhi- Death -rises – 43 people- PM Modi