ಅಗ್ನಿ ಅವಘಡ: ಒಂದೇ ಕುಟುಂಬದ ಆರು ಮಂದಿ ಸಜೀವ ದಹನ.

ಹೈದರಾಬಾದ್, ಡಿಸೆಂಬರ್,17,2022(www.justkannada.in):  ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ  ಒಂದೇ ಕುಟುಂಬದ ಆರು ಮಂದಿ ಸಜೀವದಹನವಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಮಂಚಿರ್ಯಾಲ  ಜಿಲ್ಲೆ ವೆಂಕಟಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡಿಪಲ್ಲಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಮಾಲೀಕ ಮಾಸು ಶಿವಯ್ಯ (50), ಪತ್ನಿ ಮಾಸು ಪದ್ಮಾ (45), ಪದ್ಮಾರವರ ಅಕ್ಕನ ಮಗಳು ಮೌನಿಕ(25) ಹಾಗೂ ಇಬ್ಬರು ಮಕ್ಕಳು ಸೇರಿ ಶಾಂತಯ್ಯ ಎಂಬವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರಾತ್ರಿ ಆಕಸ್ಮಿಕ ಅಗ್ನಿ ಅವಘಢ ಸಂಭವಿಸಿದ್ದು, ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ ಎಂದು ತಿಳಿದುಬಂದಿದೆ.

Key words: Fire- accident-Six members – same family -dead