ರೈಲಿನಲ್ಲಿ ಅಗ್ನಿ ಅವಘಡ: 10 ಮಂದಿ ಪ್ರಯಾಣಿಕರು ಸಾವು.

ಚೆನ್ನೈ,ಆಗಸ್ಟ್,26,2023(www.justkannada.in):   ಪ್ಯಾಸೆಂಜರ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿ 10 ಪ್ರಯಾಣಿಕರು ಮೃತಪಟ್ಟಿರುವ  ಘಟನೆ ತಮಿಳುನಾಡಿನ ಮದುರೈ ರೈಲು ನಿಲ್ದಾಣದಲ್ಲಿ ನಡೆದಿದೆ.

ಇಂದು ಮುಂಜಾನೆ 5.15ಕ್ಕೆ ಈ ಘಟನೆ ಸಂಭವಿಸಿದೆ.  ಲಖನೌ-ರಾಮೇಶ್ವರಂ ಎಕ್ಸ್‌ ಪ್ರೆಸ್‌ ರೈಲಿನ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು 10 ಮಂದಿ ಸಾವನ್ನಪ್ಪಿದರೇ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ರೈಲಿನ ಬೋಗಿಯಲ್ಲಿ  50ಕ್ಕೂ  ಹೆಚ್ಚು ಪ್ರಯಾಣಿಕರಿದ್ದರು. ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಈ ಘಟನೆ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಮೃತಪಟ್ಟವರಲ್ಲಿ ಆರು ಮಂದಿ ಉತ್ತರ ಪ್ರದೇಶದವರಾಗಿದ್ದು, ಅವರು ರಾಮೇಶ್ವರಂಗೆ ತೀರ್ಥಯಾತ್ರೆ ಸಲುವಾಗಿ ತೆರಳಿದ್ದರು. ರೈಲು ಬೋಗಿಗೆ ಅಕ್ರಮವಾಗಿ ಎಲ್ಪಿಜಿ ಸಿಲಿಂಡರ್ ತಂದು ಟೀ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ.

Key words: Fire accident – train- 10 passengers –death