ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು

ಬೆಂಗಳೂರು, ಆಗಸ್ಟ್​ 16,2025 (www.justkannada.in) :  ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.

ಮದನ್ ಸಿಂಗ್ ಮೃತಪಟ್ಟ ವ್ಯಕ್ತಿ. ಮತ್ತೊಂದು ಮೃತದೇಹವನ್ನ ಹೊರತೆಗೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

ಸಂದೀಪ್ ಮತ್ತು ಬಾಲಕೃಷ್ಣ ಎಂಬುವವರ ಒಡೆತನದ ಒಟ್ಟು ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನೆಲಮಹಡಿ ಸೇರಿ ಎರಡು ಮಹಡಿಯಲ್ಲಿ ಗೋಡೌನ್ ಇದೆ. ಮೊದಲ ಮಹಡಿಯಲ್ಲಿ ಮೂವರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮೂರನೇ ಮಹಡಿಯಲ್ಲಿ ಮದನ್ ಕುಮಾರ್ ಪತ್ನಿ ಸಂಗೀತಾ, ಮಕ್ಕಳಾದ ವಿಹಾನ್ ಹಾಗೂ ನಿತೇಶ್​​ ವಾಸವಿದ್ದರು. ಘಟನೆಯಲ್ಲಿ ಮದನ್ ಸಿಂಗ್ ಸಾವನ್ನಪ್ಪಿದ್ದಾರೆ.

ನಿನ್ನೆ ವಿಲ್ಸನ್ ಗಾರ್ಡ್ ಬಳಿ ಸಿಲಿಂಡರ್ ಸ್ಪೋಟಗೊಂಡು ಓರ್ವ 10 ವರ್ಷದ ಬಾಲಕ ಮೃತಪಟ್ಟಿ ಹಲವರಿಗೆ ಗಾಯವಾಗಿತ್ತು. ಇದೀಗ ಈ ಬೆನ್ನಲ್ಲೆ ಮತ್ತೊಂದು ದುರಂತ ನಡೆದಿದೆ.

Key words: Fire, plastic mat shop, Two dead, Bangalore