ಬೆಂಗಳೂರಿನಲ್ಲಿ ಅಗ್ನಿದುರಂತ: ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲು.

ಬೆಂಗಳೂರು,ಸೆಪ್ಟಂಬರ್,22,2021(www.justkannada.in):  ಬೆಂಗಳೂರಿನ ದೇವರಚಿಕ್ಕಹಳ್ಳಿಯ ಆಶ್ರಿತಾ ಅಪಾರ್ಟ್ ಮೆಂಟ್ ನಲ್ಲಿ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ಲ್ಯಾಟ್ ಮಾಲೀಕ ಭೀಮ್ ಸೇನ್ ರಾವ್ ಅವರು ನೀಡಿರುವ ದೂರಿನ ಮೇರೆಗೆ ಬೇಗೂರು ಠಾಣಾ ಪೊಲೀಸರು ಅಗ್ನಿ ಅವಘಡ, ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಕಿ ಹೊತ್ತಿ ಮನೆ ಸಂಪೂರ್ಣ ಸುಟ್ಟು ಹೋಗಿದೆ. ಅಗ್ನಿ ದುರಂತದಲ್ಲಿ ಪತ್ನಿ ತಾಯಿ ಮೃತಪಟ್ಟಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಘಟನೆಗೆ ಕಾರಣದ ಬಗ್ಗೆ ತನಿಖೆ ನಡೆಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ನಿನ್ನೆ ದೇವರಚಿಕ್ಕಹಳ್ಳಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಭಾಗ್ಯರೇಖಾ ಸೇರಿ ಇಬ್ಬರು ಮೃತಪಟ್ಟಿದ್ದರು.

Key words: Fire – Bangalore- apartment-Case -Begur Station.