ಬೆಂಗಳೂರು,ಆಗಸ್ಟ್,12,2023(www.justkannada.in): ನಿನ್ನೆ ಬಿಬಿಎಂಪಿ ಮುಖ್ಯಕಚೇರಿಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಹಲಸೂರು ಠಾಣಾ ಪೊಲೀಸರು ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.![]()
ನಿನ್ನೆ ಬಿಬಿಎಂಪಿ ಕಚೇರಿಯ ಗುಣ ನಿಯಂತ್ರಣ ವಿಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹಲವು ನೌಕರರು ತೀವ್ರ ಗಾಯಗೊಂಡಿದ್ದರು. ಈ ಸಂಬಂಧ ತಡರಾತ್ರಿ ಬಿಬಿಎಂಪಿ ಅಧಿಕಾರಿಗಳು ದೂರು ನೀಡಿದ್ದರು.
ಇದೀಗ ಲ್ಯಾಬ್ ಟೆಕ್ನಿಷಿಯನ್ ಸುರೇಶ್, AW ಆನಂದ್ ಎಂಬುವವರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Fire -case – BBMP -head office- two – detained – police.







