ಬಿಬಿಎಂಪಿ ಮುಖ್ಯಕಚೇರಿಯಲ್ಲಿ ಬೆಂಕಿ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ.

ಬೆಂಗಳೂರು,ಆಗಸ್ಟ್,12,2023(www.justkannada.in):  ನಿನ್ನೆ ಬಿಬಿಎಂಪಿ ಮುಖ್ಯಕಚೇರಿಯಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಹಲಸೂರು ಠಾಣಾ ಪೊಲೀಸರು ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ಬಿಬಿಎಂಪಿ ಕಚೇರಿಯ ಗುಣ ನಿಯಂತ್ರಣ ವಿಭಾಗದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹಲವು ನೌಕರರು ತೀವ್ರ ಗಾಯಗೊಂಡಿದ್ದರು. ಈ ಸಂಬಂಧ  ತಡರಾತ್ರಿ ಬಿಬಿಎಂಪಿ ಅಧಿಕಾರಿಗಳು ದೂರು ನೀಡಿದ್ದರು.

ಇದೀಗ ಲ್ಯಾಬ್ ಟೆಕ್ನಿಷಿಯನ್ ಸುರೇಶ್,  AW ಆನಂದ್   ಎಂಬುವವರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Fire -case – BBMP -head office- two – detained – police.