ಮದ್ದಿನ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 8 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ.

ಹುಬ್ಬಳ್ಳಿ,ಜುಲೈ23,2022(www.justkannada.in): ಮದ್ದಿನ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ 8ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನಲ್ಲಿ ನಡೆದಿದೆ.

ಹುಬ್ಬಳ್ಳಿ ತಾಲ್ಲೂಕಿನ ತಾರಿಹಾಳ ಕೈಗಾರಿಕಾ ಪ್ರದೇಶದ ಮದ್ಧಿನ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, 8 ಮಂದಿಗೆ ಗಂಭೀರ ಗಾಯಗಳಾಗಿವೆ. ಒಂದು ಬೈಕ್ ಸಹ ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ.myosre- Fire -short circuit-burning - cow

ಇನ್ನು 4 ರಿಂದ 5 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಗಾಯಾಳುಗಳನ್ನ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Fire- factory-8 people – seriously injured-hubli