ಕಲಬುರ್ಗಿ ರೈಲ್ವೆ ನಿಲ್ದಾಣದ ಗೂಡ್ಸ್ ರೈಲಿನಲ್ಲಿ  ಅಗ್ನಿ ಆಕಸ್ಮಿಕ…..

ಕಲಬುರಗಿ,ಜ,2,2020(www.justkannada.in): ಕಲಬುರ್ಗಿ ರೈಲ್ವೆ ನಿಲ್ದಾಣದಲ್ಲಿ ಗೂಡ್ಸ್ ರೈಲಿನಲ್ಲಿ  ಅಗ್ನಿ ಆಕಸ್ಮಿಕ ಸಂಭವಿಸಿದ್ದು ಸದ್ಯ ಅಪಾಯದಿಂದ ಸಿಬ್ಬಂದಿ ಪಾರಾಗಿದ್ದಾರೆ.

ರೈಲ್ವೆ ನಿಲ್ದಾಣದ ಪಿಡಿಎ ಎಂಜಿನಿಯರಿಂಗ್ ಕಾಲೇಜು ಗೇಟ್ ಬಳಿ ನಿಂತಿದ್ದ ಗೂಡ್ಸ್ ನಲ್ಲಿ ಈ ಘಟನೆ ಸಂಭವಿಸಿದೆ.  ಗೂಡ್ಸ್ ವಾಹನದ ಸಿಬ್ಬಂದಿ ಇರುವ ವಿಶೇಷ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.  ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ನಡೆದ ವೇಳೆ ಬೋಗಿಯಲ್ಲಿ 6 ಜನ ಸಿಬ್ಬಂದಿಯಿದ್ದರು ಎನ್ನಲಾಗಿದ್ದು ಬೆಂಕಿ ಹೊತ್ತಿಕೊಂಡ ತಕ್ಷಣ ಸಿಬ್ಬಂದಿಗಳು  ಬೋಗಿ ಬಿಟ್ಟು ಹೊರಗೆ ಓಡಿ ಬಂದಿದ್ದಾರೆ. ಘಟನೆ ವೇಳೆ ಸದ್ಯ ಅದೃಷ್ಟವಶಾತ್ ಯಾರಿಗೂ ಹಾನಿ ಸಂಭವಿಸಿಲ್ಲ. ಅಗ್ನಿ ಅವಘಡಕ್ಕೆ ಕೆಲ ವಸ್ತುಗಳು ಸುಟ್ಟು ಭಸ್ಮವಾಗಿದ್ದು ಸಕಾಲಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Key words: Fire – goods train -Kalaburgi -railway station