ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ​​ ಉದ್ಯಾನ್ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ.

ಬೆಂಗಳೂರು,ಆಗಸ್ಟ್,19,2023(www.justkannada.in):   ಮೆಜೆಸ್ಟಿಕ್​​ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್​​ ಎಕ್ಸ್​ಪ್ರೆಸ್​​​​ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾಣ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ರೈಲಿನ ಎರಡು ಕೋಚ್​​​ಗಳಿಗೆ ಆವರಿಸಿದೆ. ಇದನ್ನು ಕಂಡು ಪ್ರಯಾಣಿಕರು ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿ  ಈ ಕುರಿತು ಮಾತನಾಡಿದ ರೈಲ್ವೆ ಎಸ್ಪಿ ಸೌಮ್ಯಲತಾ, ಸದ್ಯಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡ ಶಂಕೆ ಇದೆ. ಎಫ್ಐ ಆರ್ ದಾಖಲಿಸಿಕೊಂಡು ತನಿಖೆ ಮಾಡುತ್ತೇವೆ. ತನಿಖೆ ನಂತರ ಬೆಂಕಿ ಹೊತ್ತಿಕೊಂಡಿದ್ದೇಗೆ ಎಂಬುದು ತಿಳಿಯಲಿದೆ. ಪ್ರಯಾಣಿಕರಿಗೆ ಯಾರಿಗೂ ತೊಂದರೆಯಾಗಿಲ್ಲ ಎಂದರು.

Key words: Fire – Udyan Express-train -Sangolli railway -station.