ಬೆಂಗಳೂರು, ಅಕ್ಟೋಬರ್ 23,2025 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಪಟಾಕಿ ಅವಘಡ ಪ್ರಕರಣಗಳು ಹೆಚ್ಚಳವಾಗಿದೆ. ಪಟಾಕಿ ಅವಘಡದಿಂದ ಸುಮಾರು250ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಗರದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಪಟಾಕಿ ಸಿಡಿತದಿಂದ 250ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿಯುಂಟಾಗಿದೆ. ಎಂಬ ಆಘಾತಕಾರಿ ವಿಷಯ ತಿಳಿದು ಬಂದಿದೆ.
ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 90 ಜನರು ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 37 ಜನರು, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 35 ಜನರು, ಹಾಗೇನೆ ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ 13 ಮಂದಿ, ಮೋದಿ ಆಸ್ಪತ್ರೆಯಲ್ಲಿ 4 ಮಂದಿ ಮತ್ತು ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ 4 ಮಂದಿ ಪಟಾಕಿ ಅವಘಡದಿಂದ ಗಾಯಗೊಂಡು ದಾಖಲಾಗಿದ್ದಾರೆ.
Key words: Firecracker, accident ,Bengaluru, 250 people, eye damage