ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: 8 ಮಂದಿ ಸಾವು: ಪರಿಹಾರ ಘೋಷಣೆ.

kannada t-shirts

ಹರ್ದಾ,ಫೆಬ್ರವರಿ,6,2024(www.justkannada.in): ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ 8 ಮಂದಿ ಸಾವನ್ನಪ್ಪಿ 60ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಘರ್ ಪ್ರದೇಶದ ಬಳಿ ನಡೆದಿದೆ.

ಬೈರಾಘರ್ ಪ್ರದೇಶದ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು  60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭೀಕರ ಸ್ಪೋಟದಿಂದಾಗಿ ಹತ್ತಿರದ 50ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ವ್ಯಾಪಿಸಿದ್ದು, ಜನರು ತಮ್ಮನ್ನು ರಕ್ಷಿಸಿಕೊಳ್ಳಲು ತಮ್ಮ ಮನೆಗಳನ್ನ ತೊರೆದಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಟ್ಟರು.

ಇನ್ನು  ಮೃತರ ಕುಟುಂಬಕ್ಕೆ ಮಧ್ಯಪ್ರದೇಶ ಸರ್ಕಾರ ಪರಿಗಾರ ತಲಾ 4 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಅಲ್ಲದೆ  ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಘಟನಾ ಸ್ಥಳಕ್ಕೆ 400ಕ್ಕೂ ಹೆಚ್ಚು ಪೊಲೀಸರನ್ನ ಕಳುಹಿಸಲಾಗಿದೆ ಎಂದು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ತಿಳಿಸಿದ್ದಾರೆ.

Key words: Firecracker- factory –blast-8 dead- Relief- announced.

website developers in mysore