ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ನಿಷೇಧಕ್ಕೆ ಸರ್ಕಾರ ನಿರ್ಧಾರ…

ಬೆಂಗಳೂರು,ನವೆಂಬರ್,6,2020(www.justkannada.in): ರಾಜ್ಯದಲ್ಲಿ  ಕೊರೋನಾ ಹರಡುತ್ತಿರುವ ಹಿನ್ನೆಲೆ ಈ ಬಾರಿ ದೀಪಾವಳಿ ಹಬ್ಬದಂದು ಪಟಾಕಿಯನ್ನ ನಿಷೇಧ ಮಾಡಲಾಗಿದೆ.jk-logo-justkannada-logo

ಈ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಮಾಹಿತಿ ನೀಡಿದ್ದಾರೆ.  ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಹಚ್ಚುವುದಕ್ಕೆ ಮತ್ತು ಮಾರಾಟ ಮಾಡುವುದಕ್ಕೆ ನಿಷೇಧ ವಿಧಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಶೀಘ್ರದಲ್ಲೇ ಆದೇಶ ಹೊರಡಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.Fireworks- ban -Diwali –festival- state-cm bs yeddyurappa

ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದ ಈ ಹಿನ್ನೆಲೆ ರಾಜ್ಯದಲ್ಲಿ ಎಲ್ಲಾ ಹಬ್ಬಹರಿದಿನಗಳನ್ನ ಸರಳವಾಗಿ ಆಚರಿಸುವಂತೆ ಸರ್ಕಾರ ಈಗಾಗಲೇ ಆದೇಶಿಸಿದೆ. ಈ ಮಧ್ಯೆ ನಾಡಹಬ್ಬ ದಸರಾವನ್ನು ಸಹ ಸರ್ಕಾರ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಿದೆ. ಇದೀಗ ದೀಪಾವಳಿ ವೇಳೆ ಪಟಾಕಿ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ.

Key words: Fireworks- ban -Diwali –festival- state-cm bs yeddyurappa