ಪಟಾಕಿ ಸಿಡಿದು ನಿನ್ನೆ ಒಂದೇ ದಿನ 11 ಮಕ್ಕಳ ಕಣ್ಣಿಗೆ ಗಾಯ.

 

ಬೆಂಗಳೂರು,ನವೆಂಬರ್,6,2021(www.justkannada.in): ನಿನ್ನೆ ದೀಪಾವಳಿ ಹಬ್ಬದಲ್ಲಿ ಪಟಾಕಿ ಹಚ್ಚಿ ಸಂಭ್ರವಿಸುವ ವೇಳೆ ಪಟಾಕಿ ಸಿಡಿದು  11 ಮಕ್ಕಳ ಕಣ್ಣಿಗೆ ಗಾಯವಾಗಿರುವ ಘಟನೆ ನಡೆದಿದೆ.

ಪಟಾಕಿ ಸಿಡಿದು ನಿನ್ನೆ ಒಂದೇ ದಿನ 11 ಮಕ್ಕಳ ಕಣ್ಣಿಗೆ ಗಾಯವಾಗಿರುವ ಬಗ್ಗೆ ತಿಳಿದುಬಂದಿದೆ. ಮಿಂಟೋ ಆಸ್ಪತ್ರೆಯಲ್ಲಿ ಈವರೆಗೆ 15 ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 9 ಜನರಿಗೆ ಚಿಕಿತ್ಸೆ ನೀಡಲಾಗಿದೆ.

ದೀಪಾವಳಿ ಬಳಿಕವೂ ಪಟಾಕಿ ದುರಂತಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು,  ಸಣ್ಣ ಮಕ್ಕಳಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ಬಗ್ಗೆ ತಿಳಿದುಬಂದಿದೆ.  6 ರಿಂದ 16 ವರ್ಷದ ಮಕ್ಕಳ ಕಣ್ಣುಗಳಿಗೆ ಪಟಾಕಿಯಿಂದಾಗಿ ಅತಿ ಹೆಚ್ಚು ಹಾನಿ ಉಂಟಾಗಿದೆ. ನಿನ್ನೆ ಒಂದೇ ದಿನ 11 ಪ್ರಕರಣಗಳು ದಾಖಲಾಗಿವೆ.

 

Key words: Fireworks- burst- 11 children’s -eyes –yesterday dipavali