Sunday, August 23, 2026

BDA Apartments

Home Crime ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಪೋಟ: 10 ಮಂದಿ ಸಾವು.

ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಪೋಟ: 10 ಮಂದಿ ಸಾವು.

ವಿರುಧುನಗರ ,ಫೆಬ್ರವರಿ,17,2024(www.justkannada.in): ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ  10 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿರುದನಗರದಲ್ಲಿ ನಡೆದಿದೆ.

ತಮಿಳುನಾಡಿನ ವಿರುಧುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯಲ್ಲಿರುವ ವಿಜಯ್ ಎಂಬುವವರಿಗೆ ಸೇರಿದ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ.  ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಕಾರ್ಖಾನೆ ಸ್ಪೋಟದ ಬಳಿಕ ಹೊತ್ತಿ ಉರಿಯುತ್ತಿದ್ದು, ಸ್ಥಳಕ್ಕೆ ದೌಡಾಯಿಸಿದ  ಪೊಲೀಸರು ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಖಾನೆ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಪಟಾಕಿ ಘಟಕದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಸ್ಫೋಟದ ನಂತರ ಸುಮಾರು 3 ಕಟ್ಟಡಗಳು ನೆಲಸಮವಾಗಿವೆ ಎನ್ನಲಾಗಿದೆ.

Key words: Fireworks- factory –blast-10 death