ಗುಂಡಿನ ದಾಳಿಗೆ ವ್ಯಕ್ತಿ ಬಲಿ: ತಮ್ಮನನ್ನ ಹತ್ಯೆಗೈದ ಅಣ್ಣ..?

ಕೊಡಗು,ಮೇ,7,2025 (www.justkannada.in):  ಕೊಡಗಿನಲ್ಲಿ ಗುಂಡಿನ ಸದ್ದು ಕೇಳಿದ್ದು  ಗುಂಡಿನ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ  ಮಂಗಲದಲ್ಲಿ ನಡೆದಿದೆ.

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಅಭ್ಯತ್ ಮಂಗಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ವಿನು ಕುಮಾರ್ (53) ಮೃತಪಟ್ಟ ವ್ಯಕ್ತಿ. ತೋಟದಲ್ಲಿ ಕೆಲಸ ಮಾಡುವ ವೇಳೆ ವಿನು ಕುಮಾರ್ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ.

ಆಸ್ತಿ ವಿಚಾರಕ್ಕೆ ಅಣ್ಣ ತಮ್ಮನ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದೀಗ  ಮೃತ ವಿನು ಕುಮಾರ್ ಅಣ್ಣ ಮಣಿ ಎಂಬ ವ್ಯಕ್ತಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಅಣ್ಣ ಮಣಿಯನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ.

ತೋಟದಲ್ಲಿ‌ ಕೆಲಸ ಮಾಡುತ್ತಿದ್ದ ವೇಳೆ ವಿನುಕುಮಾರ್ ಮೇಲೆ ಗುಂಡಿ ಹಾರಿಸಿ ಕೊಲೆ ಮಾಡಲಾಗಿದ್ದು, ಗುಂಡಿನ  ಶಬ್ದ ಕೇಳಿ ಸ್ಥಳಕ್ಕೆ ಸ್ಥಳೀಯರು ಬಂದಿದ್ದು ಅಷ್ಟರಲ್ಲೇ ಗುಂಡು ಹಾರಿಸಿದ ವ್ಯಕ್ತಿ ಪರಾರಿಯಾಗಿದ್ದನು.  ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾಜನ್  ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

Key words: Man, killed, firing, Brother, Kodagu

.