Monday, October 26, 2026

Dasara Wishes

ಇಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ DasraWishes_JK DasraWishes JK
Happy Dasara
Home Crime ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್​: FIR ದಾಖಲು

ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್​: FIR ದಾಖಲು

ರಾಮನಗರ,ಏಪ್ರಿಲ್,19,2025 (www.justkannada.in): ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ  ಫೈರಿಂಗ್ ನಡೆದಿದ್ದು, ಅಪಾಯದಿಂದ ಪಾರಾಗಿದ್ದಾರೆ.

ರಾಮನಗರ ತಾಲೂಕಿನ ಬಿಡದಿ ಗೇಟ್ ಬಳಿ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿರೈ ಮೇಲೆ ಗುಂಡಿನ ದಾಳಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರಾತ್ರಿ ಮನೆ ಗೇಟ್ ಬಳಿ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ಆಗಿದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮುತ್ತಪ್ಪ ರೈ. ಒಂದು ಸುತ್ತು ಫೈರಿಂಗ್ ನಡೆಸಲಾಗಿದೆ.  ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿ ರೈಗೆ ಚಿಕಿತ್ಸೆ ನೀಡಲಾಗುತ್ತಿದೆ.

ಡ್ರೈವರ್ ಹಾಗೂ ಗನ್ ಮ್ಯಾನ್ ಜೊತೆಗೆ ಬಿಡದಿ ಮನೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಗುಂಡಿನ ದಾಳಿಯಾಗಿದೆ. ದಾಳಿ ವೇಳೆ ರಿಕ್ಕಿ ರೈ ಮೂಗು, ಕೈ ಭಾಗಕ್ಕೆ ಗಂಭೀರವಾದ ಗಾಯವಾಗಿದೆ. ಮಧ್ಯರಾತ್ರಿ 12.30 ರ ಸುಮಾರಿಗೆ ಘಟನೆ ನಡೆದಿದೆ. ಸ್ಥಳಕ್ಕೆ ಬಿಡದಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದು,  ಈ ಸಂಬಂಧ ನಾಲ್ವರ ವಿರುದ್ದ ಎಫ್ ಐಆರ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Firing, Muthappa Rai,  son, Ricky Rai,  FIR