ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಗುಂಡಿಕ್ಕಿ ರೌಡಿಶೀಟರ್ ಬರ್ಬರ ಹತ್ಯೆ

ವಿಜಯಪುರ ,ಸೆಪ್ಟಂಬರ್,3,2025 (www.justkannada.in):  ಭೀಮಾತೀರದಲ್ಲಿ ಮತ್ತೆ ಗುಂಡಿನ  ಸದ್ದು ಕೇಳಿ ಬಂದಿದ್ದು, ರೌಡಿಶೀಟರ್  ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ನಡೆದಿದೆ.

ರೌಡಿಶೀಟರ್ ಭಿಮನಗೌಡ ಬಿರಾದರ್ (45) ಹತ್ಯೆಯಾದ ರೌಡಿಶೀಟರ್. ಭೀಮನಗೌಡ ಹೇರ್ ಕಟಿಂಗ್ ಮಾಡಿಸಿಕೊಳ್ಳುವಾಗ ಅಲ್ಲಿಗೆ ಬಂದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ 3 ಸುತ್ತು ಗುಂಡು ಹಾರಿಸಿ ಎಸ್ಕೇಪ್ ಆಗಿದ್ದರು.

ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ರೌಡಿಶೀಟರ್ ಭಿಮನಗೌಡ ಬಿರಾದರ್ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಚಡಚಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Vijaypur, firing, Rowdysheeter, dead