ಮೊತ್ತಮೊದಲ ‘ಜೈವಿಕ ಆರ್ಥಿಕತೆ ವರದಿ’ ಬಿಡುಗಡೆ:  ಆರ್ಥಿಕತೆಗೆ 5000 ಕೋಟಿ ಡಾಲರ್ ಕೊಡುಗೆ ಗುರಿ- ಡಿಸಿಎಂ ಅಶ್ವಥ್ ನಾರಾಯಣ್…

ಬೆಂಗಳೂರು, ನವೆಂಬರ್,20,2020(www.justkannada.in):  ಮುಂದಿನ ಐದು ವರ್ಷಗಳಲ್ಲಿ ಕರ್ನಾಟಕದ “ಜೈವಿಕ ಆರ್ಥಿಕತೆ”(ಬಯೋ ಎಕಾನಮಿ) ಕೊಡುಗೆಯನ್ನು 5000 ಕೋಟಿ ಡಾಲರ್ ಗಳಿಗೆ ಹೆಚ್ಚಿಸುವ ದಿಸೆಯಲ್ಲಿ ಲಸಿಕೆ, ಕೃಷಿ ತಾಂತ್ರಿಕತೆ ಜೈವಿಕ-ತಯಾರಿಕೆ ಹಾಗೂ ಸಾಗರ ಸಂಬಂಧಿ ಜೈವಿಕ ತಾಂತ್ರಿಕತೆಯಲ್ಲಿ ಮೌಲ್ಯವರ್ಧನೆ ವಲಯಗಳಿಗೆ ಒತ್ತು ನೀಡಲಾಗುವುದು ಎಂದು ಐಟಿ/ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ರಾಜ್ಯದ ಮೊತ್ತಮೊದಲ ”ಕರ್ನಾಟಕ ಜೈವಿಕ ಆರ್ಥಿಕತೆ ವರದಿ-2020” ಯನ್ನು ಶುಕ್ರವಾರ “ಬೆಂಗಳೂರು ತಂತ್ರಜ್ಞಾನ ಮೇಳ”ದಲ್ಲಿ ಬಿಡುಗಡೆ ಮಾಡಿ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ವರದಿಯು 7 ಪ್ರಮುಖ ಶಿಫಾರಸುಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.kannada-journalist-media-fourth-estate-under-loss

ಕೃಷಿ, ಪಶುಸಂಗೋಪನೆ, ಪೌಷ್ಟಿಕತೆ, ಲಸಿಕೆ, ಆರೋಗ್ಯ ಸೇವೆ, ಜೈವಿಕ ಇಂಧನ, ಸಾಗರ ಜೀವನೋಪಾಯ ಕ್ಷೇತ್ರಗಳಲ್ಲಿ ಆಗುವ ಜೈವಿಕ ತಂತ್ರಜ್ಞಾನದ ಬೆಳವಣಿಗೆಗಳು ಜನಸಾಮಾನ್ಯರ ಬದುಕನ್ನು ನೇರವಾಗಿ ಸುಧಾರಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚರ್ಮ ಸೇರಿದಂತೆ ದೇಹದ ಯಾವುದೇ ಅಂಗವನ್ನು ಪ್ರಯೋಗಾಲಯದಲ್ಲಿ ಬೆಳೆಸಬಹುದಾದ ಮಟ್ಟಕ್ಕೆ ಜೈವಿಕ ತಂತ್ರಜ್ಞಾನ ಬೆಳೆದಿದೆ. ಜೀನ್ ಎಡಿಟಿಂಗ್ ನಿಂದ ವಂಶಪಾರಂಪಾರ್ಯವಾಗಿ ಬರುವ ಕಾಯಿಲೆಗಳನ್ನು ನಿವಾರಿಸಬಹುದು ಎಂಬ ಆಶಾಭಾವ ಮೂಡಿದೆ. ಮುಂಬರುವ ದಿನಗಳಲ್ಲಿ ಈ ಕ್ಷೇತ್ರದ ಸಂಶೋಧನೆಗಳು ಬದುಕಿನ ಗುಣಮಟ್ಟದ ಮೇಲೆ ಅಗಾಧ ಪರಿಣಾಮ ಬೀರಲಿವೆ ಎಂದು ಅಶ್ವತ್ಥ ನಾರಾಯಣ ವಿವರಿಸಿದರು.

ಕರ್ನಾಟಕ ಸರ್ಕಾರವು ಜೈವಿಕ ತಂತ್ರಜ್ಞಾನದ ಸಾಮರ್ಥ್ಯವನ್ನು ಮನಗಂಡಿದೆ. ಹೀಗಾಗಿ, 20 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆಯೊಂದಕ್ಕೆ ಇದೀಗ ಚಾಲನೆ ಸಿಕ್ಕಿದೆ. ಇದರ ಪರಿಣಾಮವಾಗಿ ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ 7000 ಕೋಟಿ ರೂಪಾಯಿ ವೆಚ್ಚದಲ್ಲಿ 80 ಲಕ್ಷ ಚದುರ ಅಡಿಗಳಷ್ಟು ವಿಸ್ತೀರ್ಣದಲ್ಲಿ ಜೈವಿಕ-ಉದ್ಯಮ ಸಮುಚ್ಚಯದ (ಬಯೋ-ಇಂಡಸ್ಟ್ರಿ ಕ್ಲಸ್ಟರ್)  ನಿರ್ಮಾಣ ಆರಂಭಗೊಂಡಿದೆ ಎಂದು ತಿಳಿಸಿದರು.

ನಮ್ಮ ರಾಜ್ಯದಲ್ಲಿ 35ಕ್ಕೂ ಹೆಚ್ಚು ಜೈವಿಕ ತಂತ್ರಜ್ಞಾನ ಸಂಶೋಧನಾ ಕೇಂದ್ರಗಳು ಹಾಗೂ ಅತ್ಯಾಧುನಿಕ ಬಯೋ-ಇನ್ ಕ್ಯುಬೇಟರ್ ಗಳು (ಜೈವಿಕ ಪರಿಪೋಷಕಗಳು) ಇವೆ. ಸರ್ಕಾರದ ಅನುದಾನದ ನೆರವಿನಿಂದ 150ಕ್ಕೂ ಹೆಚ್ಚು ನವೋದ್ಯಮಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ. ಜೈವಿಕ ತಂತ್ರಜ್ಞಾನದ ನೆರವಿನಿಂದ ಹೆಣ್ಣು ಕರುಗಳಿಗೆ ಮಾತ್ರವೇ ಜನ್ಮ ನೀಡುವಂತೆ ಮಾಡಲು ಸಾಧ್ಯ ಎಂಬುದನ್ನು ತೋರಿಸಿರುವ “ಜೀವ ಸೈನ್ಸಸ್” ಸೇರಿದಂತೆ ಹಲವು ಕಂಪನಿಗಳು “ಬಯೋ-ವೆಂಚರ್” ಅನುದಾನದೊಂದಿಗೆ ಮುನ್ನಡೆದಿದ್ದು, ಇವೆಲ್ಲವೂ 5000 ಕೋಟಿ ಡಾಲರ್ ಆರ್ಥಿಕ ಕೊಡುಗೆಯ ಗುರಿ ಸಾಧನೆಗೆ ಪೂರಕವಾಗಿದೆ ಎಂದು ಅಶ್ವತ್ಥ ನಾರಾಯಣ್ ವಿವರಿಸಿದರು.

ಜೈವಿಕ ತಂತ್ರಜ್ಞಾನ ದೂರದರ್ಶಿತ್ವ ಮಂಡಳಿ ಅಧ್ಯಕ್ಷರಾದ ಕಿರಣ್ ಮಜುಂದಾರ್ ಷಾ ಅವರು ಮಾತನಾಡಿ, ನೆಕ್ಸ್ಟ್ ಜೆನ್ ವ್ಯಾಕ್ಸಿನ್ ಗಳು (ಹೊಸ ತಲೆಮಾರಿನ ಲಸಿಕೆ), ನೆಕ್ಸ್ಟ್ ಜೆನ್ ಆಂಟಿಬಯಾಟಿಕ್, ಪರಿಸರ ಸ್ನೇಹಿ ನೆಕ್ಸ್ಟ್ ಜೆನ್ ಬ್ಯಾಟರಿಗಳು, ಎನ್ ಜೈಮ್ ತಾಂತ್ರಿಕತೆಗಳು, ಜೈವಿಕ ಇಂಧನಗಳು ಮುಂಬರುವ ದಿನಗಳಲ್ಲಿ ಜಾದೂ ಮಾಡಲಿವೆ ಎಂದು ಅಭಿಪ್ರಾಯಪಟ್ಟರು.

ಮಾಲಿನ್ಯದಿಂದಾಗಿ ನಮ್ಮ ಜಲಮೂಲಗಳು ಮಲಿನವಾಗುತ್ತಿವೆ. ಎನ್ ಜೈಮ್ ಟೆಕ್ನಾಲಜಿ (ಕಿಣ್ವ ತಾಂತ್ರಿಕತೆ) ಒಳಗೊಂಡ ಜೈವಿಕ ತಂತ್ರಜ್ಞಾನದ ನೆರವಿನಿಂದ ಇವೆಲ್ಲವನ್ನೂ ಪರಿಣಾಮಕಾರಿಯಾಗಿ ಸ್ವಚ್ಛಗೊಳಿಸಬಹುದು. ಕೇಂದ್ರ ಸರ್ಕಾರವು ನಮ್ಮ ಜಲಮೂಲಗಳನ್ನು ಈ ತಂತ್ರಜ್ಞಾನ ಬಳಸಿ ಸ್ವಚ್ಛಗೊಳಿಸುವುದನ್ನು ಕಡ್ಡಾಯಗೊಳಿಸಬೇಕು. ಅದೇ ರೀತಿ, ಕುಲಾಂತರಿ ಬೆಳೆಗಳನ್ನು ಪ್ರಯೋಗಾರ್ಥವಾಗಿ ಬೆಳೆಯಲು ಅನುಮತಿ ನೀಡಿ ಅವುಗಳ ಸಾಧಕ-ಬಾಧಕ ಅಧ್ಯಯನಕ್ಕೆ ಅನುವು ಮಾಡಿಕೊಡಬೇಕು ಎಂದು ಅಭಿಪ್ರಾಯಪಟ್ಟರು.first-economic-bio-economy-report-released-5000-billion-economy-dcm-ashwath-narayan

ಸುಮಾರು 20 ವರ್ಷಗಳ ಹಿಂದೆ ಜೈವಿಕ ತಂತ್ರಜ್ಞಾನ ನೀತಿಯನ್ನು ರಾಜ್ಯವು ಮೊದಲ ಬಾರಿಗೆ ಜಾರಿಗೊಳಿಸಿತು. ಆಗ ಭವಿಷ್ಯದಲ್ಲಿ ಇದು ಇಷ್ಟು ವ್ಯಾಪಕವಾಗಿ ಬೆಳೆಯುತ್ತದೆಂಬ ಕಲ್ಪನೆ ಯಾರಿಗೂ ಇರಲಿಲ್ಲ. ಈ ಕ್ಷೇತ್ರ ಈಗ ರಾಜ್ಯದ ಜಿಎಸ್ ಡಿಪಿ ಗೆ ಶೇ 10.23ರಷ್ಟು ಕೊಡುಗೆ ನೀಡುತ್ತಿದೆ. “ಜೈವಿಕ ಆರ್ಥಿಕತೆ ವರದಿ”ಯಲ್ಲಿ ನೀಡಲಾಗಿರುವ ಸಲಹೆಗಳನ್ನು ಅಳವಡಿಸಿಕೊಂಡರೆ ಈ ವಲಯವು ಇನ್ನಷ್ಟು ದೊಡ್ಡದಾಗಿ ಬೆಳೆದು ಜನರ ಬದುಕಿನ ಸುಧಾರಣೆಗೆ ಸಹಕಾರಿಯಾಗಲಿದೆ. ಜೊತೆಗೆ ಈಗ ಸುಮಾರು 2200 ಕೋಟಿ ಡಾಲರ್ ಇರುವ ಈ ವಲಯದ ಕೊಡುಗೆಯನ್ನು ಐದು ವರ್ಷಗಳಲ್ಲಿ 5000 ಕೋಟಿ ಡಾಲರ್ ಗೆ ಹೆಚ್ಚಿಸಲು ಸಾಧ್ಯವಾಗಲಿದೆ  ಎಂದು ಐಟಿ/ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ಏಬಲ್” (ಅಸೋಸಿಯೇಷನ್ ಫಾರ್ ಬಯೋಟೆಕ್-ಲೆಡ್ ಎಂಟರ್ ಪ್ರೈಸಸ್) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಾರಾಯಣನ್ ಸುರೇಶ್ ಅವರು ವರದಿಯಲ್ಲಿರುವ ಅಂಶಗಳ ಕುರಿತು ಮಾತನಾಡಿದರು. ಕರ್ನಾಟಕ ನಾವೀನ್ಯತಾ ಮತ್ತು ತಂತ್ರಜ್ಞಾನ ಸಂಸ್ಥೆಯ (ಕಿಟ್ಸ್) ವ್ಯವಸ್ಥಾಪಕ ನಿರ್ದೇಶಕಿ ಮೀನಾ ನಾಗರಾಜ್ ವೇದಿಕೆ ಮೇಲಿದ್ದರು. ಐಬ್ಯಾಬ್ ಮುಖ್ಯಸ್ಥ ಸುಬ್ರಮಣ್ಯಂ ಆನ್ ಲೈನ್ ಮೂಲಕ ಪಾಲ್ಗೊಂಡಿದ್ದರು.

English summary….

First ever ‘Bio Economy Report’ released: Aim to contribute 5000 crore dollar to economy-DCM Ashwathnarayan
Bengaluru, Nov. 20, 2020 (www.justkannada.in): “With a view of increasing the contribution of ‘Bio Economy’ to 5,000 crore dollars in the next five years we are giving more stress on production of vaccines, adding value to agriculture technology, bio-production and sea based bio-technology areas,” opined Dr. C.N. Ashwathnarayan, IT/BT Minister and Deputy Chief Minister of Karnataka.
He released the first “Karnataka Bio Economy Report -2020” of the State on Friday, at the ‘Bengaluru Technology Mela’. Explaining that the report comprises 7 major recommendations, he expressed confidence that the lives of people would improve due to the bio technological developments that will happen in the areas of agriculture, animal husbandry, nutrition, vaccination, health service, bio fuel, sea based livelihood.
On the occasion he also informed that the construction works of the bio-technology cluster in an area of 80 lakh sq. ft. at an estimated cost of Rs. 7,000 crore has commenced in Electronic City.
Keywords: Bio-Economy/ Bengaluru Technology Mela/Karnataka Bio Economy report

Key words: First Economic Bio-Economy -Report –Released-$ 5,000 -Billion – Economy – DCM Ashwath Narayan.