ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ-ಸಚಿವ ಕೃಷ್ಣಭೈರೇಗೌಡ.

ರಾಯಚೂರು, ಜನವರಿ,16,2024(www.justkannada.in):  ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಭರವಸೆ ನೀಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ,  ರೈತರಿಗೆ  2ಸಾವಿರ ರೂ. ಪರಿಹಾರ ಕೊಡಲು ಸಿಎಂ ನಿರ್ಧಾರ ಮಾಡಿದ್ದಾರೆ.  ರೈತರ ಅಕೌಂಟ್ ಗೆ ನೇರವಾಗಿ ಹಾಕುತ್ತೇವೆ. ಮೊದಲ ಕಂತಿನಲ್ಲಿ 800ರಿಂದ 900 ಕೋಟಿ ರೂ. ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.

ಕೇಂದ್ರದಿಂದ ಬರ ಪರಿಹಾರ ಇನ್ನೂ ಬಂದಿಲ್ಲ. ಬರ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಕೊಟ್ಟಿದ್ದೇವೆ, ಆದರೆ ಹಣ ಬಂದಿಲ್ಲ.‌ ಹೀಗಾಗಿ ನಾವೇ ರೈತರಿಗೆ 2 ಸಾವಿರ ರೂಪಾಯಿವರೆಗೆ ಪರಿಹಾರ ನೀಡಲು ನಿರ್ಧರಿಸಿದ್ದೇವೆ. ಮೊದಲ ಕಂತಿನ ಹಣ 800-900 ಕೋಟಿ ಆಗುತ್ತದೆ. 4663 ಕೋಟಿ ಹಣವನ್ನ ಕೇಂದ್ರ ಸರ್ಕಾರದ ಬಳಿ ಕೇಳಿದ್ದೇವೆ. ಬೇರೆ ಎಲ್ಲಾ ಸೇರಿ ಒಟ್ಟು 18,172 ಕೋಟಿ ರೂ. ಪರಿಹಾರ ಕೇಳಿದ್ದೇವೆ. ಎನ್‌ಡಿಆರ್‌ಎಫ್, ಎಸ್‌ಡಿಆರ್​ಎಫ್ ನಿಯಮಗಳ ಪ್ರಕಾರ ನೀಡಿವ ಪರಿಹಾರ ರೈತರ ಖರ್ಚಿಗೆ ತಾಳೆಯಾಗುವುದಿಲ್ಲ. ನಿಯಮಗಳ ಪರಿಷ್ಕರಣೆಗೆ ಪ್ರಧಾನಮಂತ್ರಿ, ಗೃಹಸಚಿವರಿಗೆ ಮನವಿ ಮಾಡಿದ್ದೇವೆ ಎಂದು ಕೃಷ್ಣಭೈರೇಗೌಡ ತಿಳಿಸಿದರು.

Key words: First installment – drought relief – farmers – Minister -Krishnabhairegowda.