Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Front Page ಶೀಘ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಡಿಸಿಎಂ ಡಿ.ಕೆ ಶಿವಕುಮಾರ್.

ಶೀಘ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ- ಡಿಸಿಎಂ ಡಿ.ಕೆ ಶಿವಕುಮಾರ್.

ನವದೆಹಲಿ, ಮಾರ್ಚ್,8,2024(www.justkannada.in):  ಲೋಕಸಭೆ ಚುನಾವಣೆಗೆ ಶೀಘ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಲೋಕಸಭೆ ಚುನಾವಣೆ  ಕುರಿತು ಪಕ್ಷದ ಅಧ್ಯಕ್ಷರು ಹಾಗೂ ಇತರ ನಾಯಕರ ಸಮ್ಮುಖದಲ್ಲಿ ಚರ್ಚೆ ನಡೆಸಲಾಗಿದೆ. ನಾವು ಸಭೆಯಲ್ಲಿ ಶೇ.50ರಷ್ಟು ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ. ಎಷ್ಟು ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದೆ, ಯಾರ ಹೆಸರು ಅಂತಿಮವಾಗಿದೆ ಎಂದು ನಾನು ಬಹಿರಂಗಪಡಿಸಲು ತಯಾರಿಲ್ಲ. ಎಐಸಿಸಿ ನಾಯಕರು ಮೊದಲ ಪಟ್ಟಿ ಅಂತಿಮಗೊಳಿಸಿ ಶೀಘ್ರವೇ ಬಿಡುಗಡೆ ಮಾಡುತ್ತಾರೆ ಎಂದು ತಿಳಿಸಿದರು.

ದಲಿತ ಸಿಎಂ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್,  ಒಳ್ಳೆಯದಾಗಲಿ, ಆಸೆ ಪಡುವುದರಲ್ಲಿ ತಪ್ಪಿಲ್ಲ. ಯಾರ್ಯಾರೋ ಏನೇನೋ ಆಸೆ ಪಡುತ್ತಾರೆ. ಮಹದೇವಪ್ಪ ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ ಎಂದರು.

Key words: first list -Congress candidates- will be- released -soon – DCM -DK Shivakumar.