ಮೊದಲ ಹಂತದ ಬೆಳೆ ಸಮೀಕ್ಷೆ ಪ್ರಕಾರ 62 ತಾಲೂಕುಗಳು ಬರ ಪಟ್ಟಿಗೆ ಸೇರ್ಪಡೆ- ಸಚಿವ ಕೃಷ್ಣಬೈರೇಗೌಡ.

ಚಿತ್ರದುರ್ಗ, ಸೆಪ್ಟೆಂಬರ್‌,6,2023(www.justkannada.in):  ರಾಜ್ಯದಲ್ಲಿ ಮೊದಲ ಹಂತದ ಬೆಳೆ ಸಮೀಕ್ಷೆ ಮಾಡಲಾಗಿದ್ದು, ಮಳೆಯ ಅಭಾವ ಹಿನ್ನೆಲೆಯಲ್ಲಿ 62 ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೃಷ್ಣ ಭೈರೇಗೌಡ,  ಆಗಸ್ಟ್‌ 18 ತನಕ ಮಳೆ ಕೊರೆತೆ ಇರುವ ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ನಡೆಸಿದ್ದೇವೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬರ ಪಟ್ಟಿಗೆ ಆಯ್ಕೆಯಾಗಿದೆ. ಇನ್ನೊಂದು ಸುತ್ತು ಬೆಳೆ ಸಮೀಕ್ಷೆ ಮಾಡಬೇಕು. ಉಳಿದ 51 ತಾಲೂಕು ಬೆಳೆ ಸಮೀಕ್ಷೆ ನಡೆಸಲಾಗುತ್ತಿದೆ.  ಮೂರ್ನಾಲ್ಕು ದಿನಗಳಲ್ಲಿ ಸಮೀಕ್ಷೆ ವರದಿ ಬರಲಿದ್ದು, ಕೇಂದ್ರದ ಮಾರ್ಗಸೂಚಿ ಪ್ರಕಾರ ಬರ ಘೋಷಣೆ ಮಾಡುತ್ತೇವೆ ಎಂದರು.

ಬಿಜೆಪಿಯವರು ಹೊಟ್ಟೆ ಪಾಡಿನ ವಿಷಯ ಮುಚ್ಚಿ ಹಾಕಲು, ಭಾವನಾತ್ಮಕ ವಿಷಯಗಳ ಮೇಲೆ ಚುನಾವಣೆ ಮಾಡುತ್ತಿದ್ದಾರೆ.  ಬಿಜೆಪಿ ನಾಯಕರು ಜನರ ಭಾವನೆಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಭಾವನಾತ್ಮಕ ವಿಷಯಗಳಿಂದ ದೇಶ ಉದ್ಧಾರ ಆಗಲ್ಲ. ಹಸಿದವರಿಗೆ ಅನ್ನ ನೀಡಬೇಕು. ಉದ್ಯೋಗ ನೀಡಿದಾಗ ದೇಶ ಅಭಿವೃದ್ಧಿ ಆಗುತ್ತದೆ. ಬಡವರನ್ನು ಮತಕ್ಕಾಗಿ ಉಪಯೋಗ ಮಾಡಿಕೊಳ್ಳುವ ರಾಜಕೀಯ ಕೊನೆ ಆಗಲಿದೆ ಎಂದು  ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

Key words: first phase- crop –survey- 62 taluks – drought list – Minister -Krishnabaire Gowda.