ಲೋಕಸಭೆ ಚುನಾವಣೆ ಬಳಿಕ ಮೊದಲ ಅಧಿವೇಶನ: ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ.ವಿ ಸದಾನಂದಗೌಡರು..

ನವದೆಹಲಿ,ಜೂ,17,2019(www.justkannada.in): ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿ 2ನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೇರಿದ್ದು, 17 ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದೆ.

 ಮಧ್ಯಪ್ರದೇಶದ ಟಿಕಾಮ್ಗಾರ್ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ವೀರೇಂದ್ರ ಕುಮಾರ್ 17ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಇಂದಿನಿಂದ ನೂತನ ಸರ್ಕಾರದ ಮೊದಲ ಅಧಿವೇಶನ ಪ್ರಾರಂಭವಾಗಿದ್ದು,  ಪ್ರಧಾನಿ ಮೋದಿ ಸೇರಿದಂತೆ ಎಲ್ಲ ಸಂಸದರು ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾರದ ವೇಳೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ ಸದಾನಂದಗೌಡರು  ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಾಗೆಯೇ ಸಂಸದ ಪ್ರಹ್ಲಾದ್ ಜೋಶಿ ಅವರೂ ಸಹ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಲೋಕಸಭೆಯಲ್ಲಿ ಕನ್ನಡದ ಧ್ವನಿ ಮೊಳಗಿಸಿದ್ದಾರೆ.

Key words: First session after Lok Sabha elections. DV Sadananda Gowda sworn in Kannada

#session #DVSadanandaGowda #sworn #Kannada