Monday, September 21, 2026

BDA Apartments

Home Crime ಮಲ್ಪೆಯಲ್ಲಿ‌  ಮೀನು ಕಳ್ಳತನ : ಮಹಿಳೆ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸಿಎಂ ಆದೇಶ.

ಮಲ್ಪೆಯಲ್ಲಿ‌  ಮೀನು ಕಳ್ಳತನ : ಮಹಿಳೆ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸಿಎಂ ಆದೇಶ.

ಬೆಂಗಳೂರು, ಮಾ.19, 2025: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌  ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ತಳಿಸಿದ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಈ  ವೀಡಿಯೋ ಕಂಡು ದಿಗ್ಭ್ರಮೆಯಾಯಿತು. ಕಾರಣವೇನೇ ಇರಲಿ  ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ಇಂತಹ ಅನಾಗರೀಕ ವರ್ತನೆ ಕರ್ನಾಟಕದಂತಹ ಸುಸಂಸ್ಕೃತ ನಾಡಿಗೆ ತಕ್ಕುದಾದುದ್ದಲ್ಲ.

ಮಲ್ಪೆಯಲ್ಲಿ‌ ಮೀನು ಕಳ್ಳತನ siddaram-cm siddaram cm

ಕಳ್ಳತನ, ಮೋಸ, ವಂಚನೆಯಲ್ಲಿ ತೊಡಗಿರುವವರ ವಿರುದ್ಧ ಕ್ರಮಕ್ಕೆ ನಮ್ಮಲ್ಲಿ ಪೊಲೀಸ್ ಇಲಾಖೆ, ಕಾನೂನು ವ್ಯವಸ್ಥೆ ಎಲ್ಲವೂ ಇದೆ, ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಕಾನೂನಿನಡಿಯಲ್ಲಿ ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ. ಈ ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

key words: Fish theft,  Malpe, CM,assaulted woman.udupi, police

summary: 

Fish theft in Malpe: CM orders action against those who assaulted woman.

ಮಹಿಳೆ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮಕ್ಕೆ ಸಿಎಂ ಆದೇಶ women-beaten women beaten

Chief Minister Siddaramaiah has instructed the police to conduct a proper investigation and take necessary action regarding the incident in which a woman was tied to a tree and brutally hanged on suspicion of stealing fish in Malpe, Udupi district.