Saturday, November 14, 2026

Dasara Wishes

ರಾಷ್ಟ್ರೀಯ ವಿಜ್ಞಾನ ಚಿತ್ರೋತ್ಸವಕ್ಕೆ ಮೈಸೂರಿನ ಯುವಕನ ಸಾಕ್ಷ್ಯಚಿತ್ರ ಆಯ್...
Happy Dasara
Home Crime ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಐವರು ಸಜೀವ ದಹನ…

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಐವರು ಸಜೀವ ದಹನ…

ಆಂಧ್ರ ಪ್ರದೇಶ,ಸೆ,14,2019(www.justkannada.in):  ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಐವರು ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರದ ಚಿತ್ತೂರು ತಾಲ್ಲೂಕಿನ ಗಂಗಾವರಂ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ಜಾಹ್ನವಿ, ಕಲಾ,ಪವನ್, ರಾಮ್, ಸಾಯಿಅಶ್ರುತ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.  ಮೃತಪಟ್ಟವರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳು ಎನ್ನಲಾಗುತ್ತಿದೆ. ತಿರುಪತಿ ಪ್ರವಾಸಕ್ಕೆಂದು ತೆರಳಿ ವಾಪಾಸ್ ಬೆಂಗಳೂರಿಗೆ ಆಗಮಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಐವರು ಕಾರಿನಲ್ಲೇ ಸಜೀವದಹನವಾಗಿದ್ದು ಓರ್ವ ಗಂಭೀರ ಗಾಯಗೊಂಡಿದ್ದಾನೆ ಎನ್ನಲಾಗಿದೆ.

Key words: five – burnt- alive – fire – moving car