ಸ್ಪೀಕರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮತ್ತೈವರು ಶಾಸಕರು

ನವದೆಹಲಿ, ಜುಲೈ 13, 2019, (www.justkannada.in): ಶಾಸಕರ ರಾಜೀನಾಮೆ ಅಂಗೀಕರಿಸುವಲ್ಲಿ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮತ್ತೈವರು ಅತೃಪ್ತ ಶಾಸಕರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ರಾಜೀನಾಮೆ ಸಲ್ಲಿಸಿರುವ 16 ಶಾಸಕರ ಪೈಕಿ ಹತ್ತು ಮಂದಿ ಶಾಸಕರು ಈ ಮೊದಲೇ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈಗ ಎಂಟಿಬಿ ನಾಗರಾಜ್, ರೋಷನ್ ಬೇಗ್, ಆನಂದ್ ಸಿಂಗ್, ಮುನಿರತ್ನ ಮತ್ತು ಕೆ. ಸುಧಾಕರ್ ಕೂಡ ರಾಜೀನಾಮೆ ವಿಳಂಬದ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಐವರು ಶಾಸಕರು ಪ್ರತ್ಯೇಕವಾಗಿ ಅಫಿಡವಿಟ್‌ಗಳನ್ನು ಸಲ್ಲಿಸಿದ್ದಾರೆ. ಜತೆಗೆ ಈ ಮೊದಲೇ ಅರ್ಜಿ ಸಲ್ಲಿಸಿದ್ದ ಹತ್ತು ಶಾಸಕರ ಅರ್ಜಿಗಳೊಂದಿಗೆ ತಮ್ಮ ಅರ್ಜಿಯನ್ನೂ ವಿಚಾರಣೆಗೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿರುವುದಾಗಿ ವರದಿಯಾಗಿದೆ.