ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು.

ಕನಕಪುರ, ಏಪ್ರಿಲ್,29,2024 (www.justkannada.in): ಈಜಲು ತೆರಳಿದ್ದ ಮೂವರು ವಿದ್ಯಾರ್ಥಿನಿಯರು ಮತ್ತು ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ  ಕನಕಪುರ ಬಳಿಯ ಮೇಕೆದಾಟು ಸಂಗಮದಲ್ಲಿ ನಡೆದಿದೆ.

ಕನಕಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನೀರುಪಾಲಾದ ಐವರು ವಿದ್ಯಾರ್ಥಿಗಳು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

ಈ ನಡುವೆ ಇಂದು  ಕಾವೇರಿ ನದಿ ಮೇಕೆದಾಟು ಸಂಗಮದಲ್ಲಿ ಮೂವರು ವಿದ್ಯಾರ್ಥಿನಿಯರು ಮತ್ತು ಇಬ್ಬರು ವಿದ್ಯಾರ್ಥಿಗಳು  ಈಜಲು ನೀರಿಗಿಳಿದಿದ್ದರು. ಈ ವೇಳೆ ನೀರಿನ ಸುಳಿಗೆ  ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಐವರು ಶವವನ್ನ ಹೊರ ತೆಗೆದಿದ್ದಾರೆ. ಕನಕಪುರ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Key words: Five, students, swimming, death