ಸರ್ಕಾರದಿಂದಲೇ ವಿವಾದಿತ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ- ಸಚಿವ ಆರ್.ಅಶೋಕ್.

ಬೆಂಗಳೂರು,ಆಗಸ್ಟ್,11,2022(www.justkannada.in) :  ಚಾಮರಾಜಪೇಟೆಯಲ್ಲಿನ ವಿವಾದಿತ ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ನೆರವೇರಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಸಚಿವ ಆರ್.ಅಶೋಕ್, ಆಗಸ್ಟ್ 15 ರಂದು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ಮಾಡಲಾಗುತ್ತದೆ. ಬೇರೆ ಯಾರಿಗೂ ಧ್ವಜಾರೋಹಣ ನೆರವೇರಿಸಲು ಅವಕಾಶವಿಲ್ಲ ಎಂದರು.

ಈದ್ಗಾ ಮೈದಾನದಲ್ಲಿ ಧ್ವಜಾರೋಹಣಕ್ಕೆ ಯಾವ ಸಂಘ-ಸಂಸ್ಥೆಗಳಿಗಾಗಲಿ ಅವಕಾಶವಿಲ್ಲ. ಬೆಂಗಳೂರಿನ ಉತ್ತರ ತಾಲೂಕಿನ ಸಹಾಯಕ ಆಯುಕ್ತರು ಆಗಸ್ಟ್ 15ರಂದು ಸರ್ಕಾರದ ವತಿಯಿಂದ ಧ್ವಜಾರೋಹಣ ಮಾಡಲಿದ್ದಾರೆ. ರಾಷ್ಟ್ರಧ್ವಜ ನೀತಿ-ನಿಯಮದಂತೆ ಎಲ್ಲರೂ ಧ್ವಜಾರೋಹಣದ ವೇಳೆ ಭಾಗವಹಿಸಬಹುದು ಎಂದು ಆರ್.ಅಶೋಕ್ ತಿಳಿಸಿದರು.

Key words: Flag-hoisting – Eidgah Maidan – government -Minister -R. Ashok