Tuesday, September 29, 2026

BDA Apartments

ಫ್ಲ್ಯಾಟ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ವ್ಯಕ್ತಿ ಸಜೀವ ದಹನ BDA JK_Adv BDA Adv
Home Crime ಫ್ಲ್ಯಾಟ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ವ್ಯಕ್ತಿ ಸಜೀವ ದಹನ.

ಫ್ಲ್ಯಾಟ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ವ್ಯಕ್ತಿ ಸಜೀವ ದಹನ.

ಬೆಂಗಳೂರು,ಸೆಪ್ಟಂಬರ್,21,2021(www.justkannada.in): ಫ್ಲ್ಯಾಟ್​ನಲ್ಲಿ ಸಿಲಿಂಡರ್​ ಸ್ಫೋಟಿಸಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಜೀವದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬೆಂಗಳೂರಿನ ದೇವರಚಿಕ್ಕನಹಳ್ಳಿಯಲ್ಲಿರುವ ಅಶ್ರೀತ ಅಪಾರ್ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಸಿಲಿಂಡರ್ ಸ್ಫೋಟಕ್ಕೆ ಒಂದು ಫ್ಲಾಟ್ ಹೊತ್ತಿ ಉರಿದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಜೀವದಹನವಾಗಿದ್ದು ಐವರಿಗೆ ಗಾಯಗಳಾಗಿದೆ. ಇನ್ನು ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ಬೇಗೂರು ಠಾಣಾ ಪೊಲೀಸರು ಆಗಮಿಸಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಬೆಂಕಿಯಿಂದಾಗಿ ಒಂದು ಫ್ಲ್ಯಾಟ್ ಸಂಪೂರ್ಣವಾಗಿ ಸುಟ್ಟು ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Key words: Flat – cylinder- explodes – man -burnt alive- bangalore