ಕೋವಿಡ್ ಕಾರಣ ನೆರೆ ಪರಿಹಾರ ವಿಳಂಬ-ಸಿಎಂ ಬಿಎಸ್ ಯಡಿಯೂರಪ್ಪ…

ಬೆಳಗಾವಿ,ಆ,25,2020(www.justkannada.in):  ಕೊರೋನಾ ಕಾರಣದಿಂದಾಗಿ  ನೆರೆಪರಿಹಾರ ತಡವಾಗಿದೆ. ಶೀಘ್ರದಲ್ಲೇ ಪರಿಹಾರವನ್ನ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.jk-logo-justkannada-logo

ಬೆಳಗಾವಿ ಪ್ರವಾಹ ಪೀಡಿದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲು ಸಾಂಬ್ರಾವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪ , ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜತೆ ಚರ್ಚಿಸಿ ನೆರೆ ಹಾನಿ ಬಗ್ಗೆ ಮಾಹಿತಿ ಪಡೆದರು. ಸಭೆ ಬಳಿಕ ಮಾತನಾಡಿದ ಸಿಎಂ ಬಿಎಸ್ ವೈ, ಕೋವಿಡ್ ಕಾರಣದಿಂದ ಪರಿಹಾರ ತಡವಾಗಿದೆ. ಸಂಕಷ್ಟದ ಸಮಯದಲ್ಲೂ ಸಂಬಳ ನೀಡುತ್ತಿದ್ದೇವೆ. ನೆರೆ ಪರಿಹಾರವನ್ನೂ ಶೀಘ್ರವಾಗಿ ನೀಡುತ್ತೇವೆ. ಅಧಿಕಾರಿಗಳಿಗೆ ಪ್ರಾಮಾಣಿಕವಾಗಿ ಬೆಳೆ ಹಾನಿ ಸರ್ವೆ ನಡೆಸಲು ಸೂಚಿಸಿದ್ದೇನೆ. ಜನಪ್ರತಿನಿಧಿಗಳು, ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ನೆರೆ ಹಾನಿ ಹಾಗೂ ಪರಿಹಾರದ ಬಗ್ಗೆ ಮಾಹಿತಿ ಪಡೆದಿದ್ದೇನೆ  ಎಂದು ತಿಳಿಸಿದರು.flood-compensation-delay-covid-19-cm-bs-yeddyurappa

ವೈಮಾನಿಕ ಸಮೀಕ್ಷೆ ನಡೆಸಿ ಪ್ರವಾಹ ಪೀಡಿತ ಪ್ರದೇಶವನ್ನ ಪರಿಶೀಲಿಸುತ್ತೇನೆ. ಬಳಿಕ ಬೆಂಗಳೂರಿಗೆ ತೆರಳಿ ಅಧಿಕಾರಿಗಳು, ಜನಪ್ರತಿನಿಧಿಗಳ ಜತೆ ಇನ್ನಷ್ಟು ಚರ್ಚೆ ನಡೆಸಿ ತುರ್ತಾಗಿ ಪರಿಹಾರ ಕಾರ್ಯ  ಕೈಗೊಳ್ಳುತ್ತೇನೆ ಎಂದು ಸಿಎಂ ಬಿಎಸ್ ವೈ ತಿಳಿಸಿದರು.

ಕೊರೋನಾದಿಂದಾಗಿ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಆದರೂ ಸಹ ಸರ್ಕಾರಿ ನೌಕರರಿಗೆ ಸಂಬಳ ನೀಡುತ್ತಿದ್ದೇವೆ. ಅಭಿವೃದ್ಧಿ ಕಾಮಗಾರಿಗಳಿಗೆ ಅಲ್ಪಸ್ವಲ್ಪ ಹಣ ಬಿಡುಗಡೆ ಮಾಡುತ್ತಿದ್ದೇವೆ.  ಇನ್ನ ಎರಡು ಮೂರು ತಿಂಗಳಲ್ಲಿ ರಾಜ್ಯದ ಆರ್ಥಿಕ ಸಮಸ್ಯೆ ಸರಿ ಹೋಗಲಿದೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.

Key words: flood-compensation- delay – covid-19-CM BS Yeddyurappa.