ನೆರೆ ಪರಿಹಾರ ವರದಿ ತಿರಸ್ಕಾರ ವಿಚಾರ: ಸಿಎಂ ಬಿಎಸ್ ವೈ ರಾಜೀನಾಮೆಗೆ ಟ್ವಿಟ್ಟರ್ ನಲ್ಲಿ ಆಗ್ರಹಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು,ಅ,4,2019(www.justkannada.in):  ರಾಜ್ಯದ ನೆರೆ ಪರಿಹಾರ ಪ್ರಸ್ತಾವನೆಯನ್ನ ಕೇಂದ್ರ ಸರ್ಕಾರ ತಿರಸ್ಕರಿಸಿದ ಬೆನ್ನಲ್ಲೆ ಮಾಜಿ ಸಿಎಂ ಸಿದ್ಧರಾಮಯ್ಯ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ವಾಗ್ದಾಳಿ ನಡೆಸಿದ್ದು ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ,  ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿಎಸ್ ವೈ ಅವರೇ ನಿಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ನಂತರ ಒಂದು ಕ್ಷಣ ಕೂಡ ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆ ನಿಮಗಿಲ್ಲ. ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟುಬಿಡಿ. ನಿಮ್ಮ ಅಸಾಮರ್ಥ್ಯಕ್ಕೆ ರಾಜ್ಯದ ಜನರನ್ನ ಶಿಕ್ಷಿಸಬೇಡಿ ಎಂದು ಕುಟುಕಿದ್ದಾರೆ.

ಹಾಗೆಯೇ ರಾಜ್ಯದ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಯೋಗ್ಯತೆ ಕೇಂದ್ರ ಸರ್ಕಾರಕ್ಕಿಲ್ಲ. ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ ಇಲ್ಲ. ನಿಮ್ಮ ಸರ್ಕಾರ ಆರ್ಥಿಕವಾಗಿ ಮಾತ್ರವಲ್ಲ ಬೌದ್ಧಿಕವಾಗಿಯೂ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಲೇವಡಿ ಮಾಡಿದ್ದಾರೆ.

Key words: flood compensation- report- rejection -Former CM Siddaramaiah – resignation – CM BS yeddyurappa