Sunday, August 2, 2026

BDA Apartments

Home Front Page  ನೆರೆ ಪರಿಹಾರ ಬಿಡುಗಡೆ ಮಾಡದ ಹಿನ್ನೆಲೆ: ಬಿಜೆಪಿ ನಾಯಕರ ಹೇಳಿಕೆ ಉಲ್ಲೇಖಿಸಿ ಕೇಂದ್ರ ಮತ್ತು ರಾಜ್ಯ...

 ನೆರೆ ಪರಿಹಾರ ಬಿಡುಗಡೆ ಮಾಡದ ಹಿನ್ನೆಲೆ: ಬಿಜೆಪಿ ನಾಯಕರ ಹೇಳಿಕೆ ಉಲ್ಲೇಖಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಕಿಡಿ..

ಬೆಂಗಳೂರು,ಸೆ,21,2019(www.justkannada.in):  ಪ್ರವಾಹ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿ ನಲುಗಿರುವ ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಕಿಡಿಕಾರಿದೆ.

ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್,  ನೆರೆ ಪರಿಹಾರ ವಿಷಯದಲ್ಲಿ ಇಂತಹ ಯೋಗ್ಯತೆ, ಸಮರ್ಥತೆ. ಸಂವೇದನೆ ತೋರಿರುವ ಇವ್ರು ರಾಜ್ಯದ ಉತ್ತರ ಕುಮಾರರೇ ಸರಿ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದ’ನೋಟ್ ಪ್ರಿಂಟ್ ಮಾಡುವ ಮಷಿನ್ ಇಲ್ಲ ಎಂಬ ಹೇಳಿಕೆ, ‘ನೆರೆ ಪರಿಹಾರಕ್ಕೆ ಕೇಂದ್ರದ ಮೊರೆ ಹೋಗುವ ಅಗತ್ಯವಿಲ್ಲ ‘ ಎಂದ್ದಿದ್ದ ತೇಜಸ್ವಿ ಸೂರ್ಯ ಅವರ ಹೇಳಿಕೆ ಹಾಗೂ ‘ಶಾಲಾ ಮಕ್ಕಳು ದೇಣಿಗೆ ಸಂಗ್ರಹಿಸಬೇಕು’ ಎಂಬ ಡಿಸಿಎಂ ಅಶ್ವತ್ ನಾರಾಯಣ್ ಹೇಳಿಕೆಯನ್ನ ಟ್ವಿಟ್ಟರ್ ನಲ್ಲಿ ಉಲ್ಲೇಖಿಸಿ ಕಾಂಗ್ರೆಸ್ ಟ್ವಿಟ್ ಮಾಡಿ ಬಿಜೆಪಿ ನಾಯಕರ ವಿರುದ್ದ ಹರಿಹಾಯ್ದಿದೆ.

Key words: flood relief-  Congress –outrage- BJP leaders