ಮತ್ತೆ ದೆಹಲಿಗೆ ತೆರಳಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ.

ಬೆಂಗಳೂರು,ಜೂನ್,23,2023(www.justkannada.in):  ಹೆಚ್ಚುವರಿ ಅಕ್ಕಿ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ತಿಕ್ಕಾಟ ನಡೆಯುತ್ತಿದ್ದು ಕೊನೆಗೂ ಕೇಂದ್ರ ಸಚಿವ ಪಿಯೂಷ್​ ಗೋಯಲ್​ ಭೇಟಿಗೆ ಅವಕಾಶ ನೀಡಿದ ಹಿನ್ನೆಲೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಮತ್ತೆ ದೆಹಲಿಗೆ ತೆರಳಿದ್ದಾರೆ.

ಆಹಾರ ಸಚಿವ ಮುನಿಯಪ್ಪ ಬೆಳಗ್ಗೆ 7.30ರ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಇಂದು ಕೇಂದ್ರ ಸಚಿವ ಪಿಯೂಶ್ ಗೋಯಲ್ ​ರನ್ನು ಸಚಿವ ಮುನಿಯಪ್ಪ ಭೇಟಿಯಾಗಿ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಪೂರೈಸುವಂತೆ ಮನವಿ ಮಾಡಲಿದ್ದಾರೆ.

ಒಂದು ವಾರದಲ್ಲಿ 2 ಬಾರಿ ಗೋಯಲ್​​ ಭೇಟಿಗೆ ಸಚಿವ ಮುನಿಯಪ್ಪ ಪ್ರಯತ್ನಿಸಿದ್ದರು. ಆದರೆ ಭೇಟಿಗೆ ಅವಕಾಶ ನೀಡಿರಲಿಲ್ಲ. ವಿವಾದವಾದ ಹಿನ್ನೆಲೆಯಲ್ಲಿ ಇಂದು ಭೇಟಿಗೆ ಅವಕಾಶ ನೀಡಿದ್ದಾರೆ. ಹೀಗಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

Key words: Food Minister- KH Muniyappa – Delhi -again.