ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್:  ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ.

ಬೆಂಗಳೂರು,ಫೆಬ್ರವರಿ,16,2024(www.justkannada.in): ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಹಾಗೆಯೇ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದರು.

ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ,  ಬೆಂಗಳೂರು ಬಿಸಿನೆಸ್ ಕಾರಿಡರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್‌ಎಫ್‌ಪಿ ಕರೆಯಲಾಗುವುದು. ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು ಎಂದರು.

ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್‌ ಪಾರ್ಕ್‌ ನಿರ್ಮಾಣ ಮಾಡಲಾಗುವುದು. 2025ರೊಳಗೆ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.

ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

Key words: Food park – three districts- Budget – create- Bangalore Business Corridor.