ಚಾಮರಾಜನಗರ,ಡಿಸೆಂಬರ್,27,2025 (www.justkannada.in): ಗಸ್ತು ತಿರುಗುತ್ತಿದ್ದ ವೇಳೆ ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿಯಾಗಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಡೆದಿದೆ.
ಸಣ್ಣಹೈದ ಹುಲಿ ದಾಳಿಗೆ ಮೃತಪಟ್ಟಿರುವ ಅರಣ್ಯ ಸಿಬ್ಬಂದಿ. ಸಣ್ಣಹೈದ ಕಳೆದ 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಬಂಡೀಪುರ ಮರಳಹಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದ ವೇಳೆ ವಾಚರ್ ಸಣ್ಣಹೈದ ಮೇಲೆ ಹುಲಿ ದಾಳಿ ನಡೆಸಿದೆ.
ಈ ವೇಳೆ ವಾಚರ್ ಸಣ್ಣಹೈದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Forest staff, death, tiger attack







