ಪಿಲಿಕುಳ ನಿಸರ್ಗ ಧಾಮಕ್ಕೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಭೇಟಿ, ಪರಿಶೀಲನೆ.

ಮಂಗಳೂರು,ಜುಲೈ,9,2021(www.justkannada.in): ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ಇಂದು ನಗರದ ಪಿಲಿಕುಳ ನಿಸರ್ಗ ಧಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.jk

ಈ ಸಂದರ್ಭದಲ್ಲಿ ಪಿಲಿಕುಳ ನಿಸರ್ಗ ಧಾಮದ ಜೈವಿಕ ಉದ್ಯಾನವನದ ಆವರಣದಲ್ಲಿ ಸಸಿಯೊಂದನ್ನು ನೆಟ್ಟಿದ ಸಚಿವ ಅರವಿಂದ ಲಿಂಬಾವಳಿ  ನಂತರ ಮೃಗಾಲಯವನ್ನು ವೀಕ್ಷಿಸಿದರು. ಬಳಿಕ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಈ ಸಂದರ್ಭದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್ ವೆಂಕಟೇಶ್ ಜಿ.ಎಸ್, ನಿರ್ದೇಶಕ ಜಯಪ್ರಕಾಶ್ ಭಂಡಾರಿ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಕೆ.ವಿ ರಾವ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಲ್ಕಾರಿ , ಬಿ.ಸಿ.ಎಫ್ ಕರಿಕಳನ್, ಎ.ಸಿ.ಎಫ್ ಸುಬ್ರಹ್ಮಣ್ಯ, ರೇಂಜ್ ಆಫೀಸರ್ ಶ್ರೀಧರ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Key words: Forest Minister- Arvind Limbavali -visits – inspects- Pilikula’s -nature -sanctuary.