ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ  ಸಂಪುಟ ಉಪಸಮಿತಿ ರಚನೆ.

ಬೆಂಗಳೂರು,ಡಿಸೆಂಬರ್, 22,2023(www.justkannada.in): ರಾಜ್ಯದಲ್ಲಿ ಕೊರೋನಾ ಏರಿಕೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ  ಕೋವಿಡ್​ ನಿಯಂತ್ರಣ, ನಿರ್ವಹಣೆಗೆ ರಾಜ್ಯ ಸರ್ಕಾರ ಸಂಪುಟ ಉಪ ಸಮಿತಿ ರಚಿಸಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಮೂರು ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿ ರಚಿಸಲಾಗಿದ್ದು,  ಸಚಿವರಾದ ಹೆಚ್. ಸಿ.ಮಹದೇವಪ್ಪ, ಶರಣ ಪ್ರಕಾಶ್ ಪಾಟೀಲ್ ಹಾಗೂ ಎಂ. ಸಿ ಸುಧಾಕರ್ ಅವರನ್ನು ಉಪಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ಸಮಿತಿಯು ಕೊವಿಡ್ ಸೇರಿ ಸಾಂಕ್ರಾಮಿಕ ರೋಗಗಳ ಕುರಿತು ಪರಾಮರ್ಶಿಸಲಿದೆ.

Key words: Formation – cabinet -sub-committee – covid – state.