ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಪಕ್ಷ ಸ್ಥಾಪಿಸುವೆ: ಗುಲಾಂ ನಬಿ ಆಜಾದ್ ಘೋಷಣೆ

ಬೆಂಗಳೂರು, ಆಗಸ್ಟ್ 28, 2022 (www.justkannada.in): ಹಿರಿಯ ನಾಯಕ ಗುಲಾಂ ನಬಿ ಆಜಾದ್ ತಮ್ಮ ತವರು ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮದೇ ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಹೊರ ಬಂದಿರುವ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರ ಮುಂದಿನ ನಡೆ ಏನು ಎಂಬುದು ಸಾಕಷ್ಟು ಕುತೂಹಲ ಮೂಡಿಸಿತ್ತು. ಇದೀಗ ಅವರು ತಮ್ಮ ಮುಂದಿನ ತೀರ್ಮಾನ ಘೋಷಿಸಿದ್ದಾರೆ. ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮದೇ ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಗುಲಾಂ ನಬಿ ಆಜಾದ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಹರಡಿವೆ. ಆದರೆ ಇವುಗಳನ್ನು ನಿರಾಕರಿಸಿರುವ ಆಜಾದ್, ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗುತ್ತೇನೆ. ರಾಜ್ಯದಲ್ಲಿ ನನ್ನದೇ ಪಕ್ಷ ಸ್ಥಾಪನೆ ಮಾಡುತ್ತೇನೆ. ರಾಷ್ಟ್ರೀಯ ಸಾಧ್ಯತೆಗಳನ್ನು ಬಳಿಕ ಪರಿಶೀಲಿಸುತ್ತೇನೆ” ಎಂದು ಸ್ಪಷ್ಟನೆ ನೀಡಿದ್ದಾರೆ.