ಮೇಲ್ಮನೆಗೆ ರಾಜ್ಯದಿಂದ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ?!

ಬೆಂಗಳೂರು, ಜುಲೈ 23, 2023 (www.justkannada.in): ಈ ಬಾರಿ ಮೇಲ್ಮನೆಗೆ ರಾಜ್ಯದಿಂದ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲು ಕಾಂಗ್ರೆಸ್ ಬಯಸಿದೆ ಎನ್ನಲಾಗುತ್ತಿದೆ.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಕರ್ನಾಟಕದಲ್ಲಿ ಮುಂದಿನ ಎಂಟು ತಿಂಗಳಲ್ಲಿ ಚುನಾವಣೆ ನಡೆಯಬೇಕಿದೆ.

ನಾರೋಗ್ಯದ ಹಿನ್ನೆಲೆಯಲ್ಲಿ ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಸಾಧ್ಯತೆಯಿರುವುದರಿಂದ ಸೋನಿಯಾ ಅವರು ಕರ್ನಾಟಕದಿಂದ ರಾಜ್ಯಸಭಾ ಸದಸ್ಯೆಯಾಗುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಮೂವರು ಕಾಂಗ್ರೆಸ್ ರಾಜ್ಯಸಭಾ ಸದಸ್ಯರಾದ ಸೈಯದ್ ನಾಸೀರ್ ಹುಸೇನ್, ಡಾ. ಎಲ್ ಹನುಮಂತಯ್ಯ ಮತ್ತು ಜಿಸಿ ಚಂದ್ರಶೇಖರ್ ಅವರ ಅವಧಿ ಮುಂದಿನ ವರ್ಷ ಏಪ್ರಿಲ್ 2 ರಂದು ಕೊನೆಗೊಳ್ಳಲಿದೆ.

ಈ ಮೂರೂ ಸ್ಥಾನಗಳಿಗೆ ಪುನಃ ತನ್ನ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಮುಂದಾಗಿದೆ. ಅಲ್ಲದೆ, ಇದೀಗ 135 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ತನ್ನ ಎಲ್ಲಾ ಮೂರು ಸ್ಥಾನಗಳನ್ನು ಉಳಿಸಿಕೊಳ್ಳುವ ಅವಕಾಶವಿದೆ.