ಬೆಂಗಳೂರು, ಮೇ 15, 2022 (www.justkannada.in): ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ.
ಹೌದು. ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಶನಿವಾರ ತಡರಾತ್ರಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಆಸ್ಟ್ರೇಲಿಯನ್ ಪೊಲೀಸರ ಪ್ರಕಾರ, ಅವರು ಕಾರಿನಲ್ಲಿ ಒಬ್ಬರೇ ಇದ್ದರು ಎಂದು ತಿಳಿದುಬಂದಿದೆ. ಶನಿವಾರ ತಡರಾತ್ರಿ ಅವರ ಕಾರು ಟೌನ್ಸ್‌ವಿಲ್ಲೆಯಲ್ಲಿ ರಸ್ತೆ ಅಪಘಾತ ಆಗಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಅಪಘಾತದ ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಳೆದ ಕೆಲ ತಿಂಗಳುಗಳ ಹಿಂದೆಯಷ್ಟೇ ಆಸ್ಟ್ರೇಲಿಯಾ ಕ್ರಿಕೆಟ್ ಶ್ರೇಷ್ಠ ಸ್ಪಿನ್ನರ್ ಶೇನ್ ವಾರ್ನ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದು ಕ್ರಿಕೆಟ್ ಅಭಿಮಾನಿಗಳಿಗೆ ಸಾಕಷ್ಟು ನೋವು ತಂದಿದೆ.







