ಮೈಸೂರು, ಜ.೦೨,೨೦೨೬: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಬಳಸದೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ ಎಸ್ಟಿ ಸಮಾಜದ ಪರ ಹೇಗೆ ನಿಂತಿದೆ ಎಂಬುದನ್ನು ಜನರ ಮುಂದೆ ಸ್ಪಷ್ಟಪಡಿಸಬೇಕು ಎಂದು ಮಾಜಿ ಮೇಯರ್ ಶಿವಕುಮಾರ್ ಆಗ್ರಹಿಸಿದ್ದಾರೆ.
ವಾಲ್ಮೀಕಿ ಹೆಸರಿನಲ್ಲಿ ರಾಜಕಾರಣ ಮಾಡಿ ಎಸ್ಟಿ ಸಮಾಜಕ್ಕೆ ಕಾಂಗ್ರೆಸ್ ದೊಡ್ಡ ಅನ್ಯಾಯ ಮಾಡುತ್ತಿದೆ ಎಂದು ಟೀಕಿಸಿರುವ ಅವರು, ಬಳ್ಳಾರಿ ನಗರದಲ್ಲಿ ವಾಲ್ಮೀಕಿ ಪ್ರತಿಮೆ ನಿರ್ಮಾಣ ಸಂಬಂಧ ಶಾಸಕ ನಾ.ರಾ. ಭರತ್ ರೆಡ್ಡಿ ರಾಜಕೀಯ ಲಾಭ ಪಡೆಯಲು ರೂಪಿಸಿದ ಷಡ್ಯಂತ್ರದಿಂದ ಅಮಾಯಕ ವಾಲ್ಮೀಕಿ ಸಮಾಜದವರು ಹಿಂಸೆ ಎದುರಿಸುವಂತಾಗಿದೆ ಎಂದು ಕಿಡಿಕಾರಿದರು.

ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ನಿರ್ಮಾಣಕ್ಕೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬ್ಯಾನರ್ ಅಳವಡಿಸುವ ಸಂದರ್ಭದಲ್ಲಿ ಅಗತ್ಯ ಸೂಕ್ಷ್ಮತೆ ವಹಿಸಬೇಕಿತ್ತು. ಅದನ್ನು ಬಿಟ್ಟು ರಾಜಕೀಯ ಲಾಭಕ್ಕಾಗಿ ಗಲಾಟೆ ಸೃಷ್ಟಿಸಿದ ಪರಿಣಾಮವೇ ಈ ದುರ್ಘಟನೆಗೆ ಕಾರಣವಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷ ವಾಲ್ಮೀಕಿ ಸಮಾಜದ ಪರವಲ್ಲ. ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಹಣವನ್ನು ದುರುಪಯೋಗಪಡಿಸಿಕೊಂಡು ಚುನಾವಣೆಗೆ ಬಳಸಿದ್ದನ್ನು ಸಮಾಜ ಮರೆತಿಲ್ಲ. ಬಡವರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳ ಮೂಲಕ ಸವಲತ್ತು ನೀಡಬೇಕಿದ್ದ ಅನುದಾನವನ್ನೇ ಬಳಸಿಕೊಂಡು ಕಾಂಗ್ರೆಸ್ ಮೋಸ ಮಾಡಿದೆ. ಇಂತಹವರು ಈಗ ಸಮಾಜದ ಪರವಾಗಿ ಮಾತನಾಡುವುದು ಹಾಸ್ಯಾಸ್ಪದವಾಗಿದೆ ಎಂದು ಶಿವಕುಮಾರ್ ಲೇವಡಿ ಮಾಡಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಯಿತು. ಪರಿಶಿಷ್ಟ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲಾಯಿತು. ವಾಲ್ಮೀಕಿ ಜಯಂತಿಯನ್ನು ಸರ್ಕಾರಿ ಜಯಂತಿಯಾಗಿ ಆಚರಿಸುವುದರ ಜತೆಗೆ ಸರ್ಕಾರಿ ರಜೆ ಘೋಷಿಸಲಾಯಿತು. ಈ ಎಲ್ಲ ನಿರ್ಣಯಗಳನ್ನು ತೆಗೆದುಕೊಂಡಿದ್ದು ಬಿಜೆಪಿ ಸರ್ಕಾರವೇ ಎಂದು ಅವರು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.
ಬಳ್ಳಾರಿ ಜಿಲ್ಲೆಯಲ್ಲಿ ನಡೆದಿರುವ ಘಟನೆ ಕುರಿತು ಉನ್ನತಮಟ್ಟದ ತನಿಖೆಗೆ ವಹಿಸಬೇಕು. ಘಟನೆಯ ಹಿಂದೆ ಕಾಣದ ಕೈಗಳ ಪಾತ್ರ ಇರುವ ಶಂಕೆ ಇದ್ದು, ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕಾಂಗ್ರೆಸ್ ಆಡಳಿತದಲ್ಲೇ ಸಮಾಜಘಾತುಕ ಶಕ್ತಿಗಳು ತಲೆಎತ್ತಿ, ಸಮಾಜದ ಶಾಂತಿ ಮತ್ತು ಸೌಹಾರ್ದವನ್ನು ಧ್ವಂಸಗೊಳಿಸುತ್ತಿವೆ ಎಂದು ಮಾಜಿ ಮೇಯರ್, ಬಿಜೆಪಿ ಮುಖಂಡ ಶಿವಕುಮಾರ್ ಆರೋಪಿಸಿದರು.
key words: How is Congress pro-ST, looted the money, Valmiki Corporation, Former BJP Mayor Shivakumar.

SUMMARY:
How is the Congress pro-ST.? which looted the money of Valmiki Corporation, : Former Mayor Shivakumar.

Former Mayor Shivakumar has demanded that the Congress government, which looted the funds of the Karnataka Maharshi Valmiki Development Corporation instead of using them for the welfare of the Scheduled Tribes, should clarify before the people how it stands in favor of the ST community.






