Sunday, October 25, 2026

Dasara Wishes

Happy Dasara
Home Front Page ಕಾಂಗ್ರೆಸ್ ಗೆ ಬಿಜೆಪಿ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಸೇರ್ಪಡೆ.

ಕಾಂಗ್ರೆಸ್ ಗೆ ಬಿಜೆಪಿ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಸೇರ್ಪಡೆ.

ಬೆಂಗಳೂರು,ಸೆಪ್ಟಂಬರ್,8,2023(www.justkannada.in): ಬಿಜೆಪಿ ಮಾಜಿ ಶಾಸಕ ಸುಕುಮಾರ್ ಶೆಟ್ಟಿ  ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ಸುಕುಮಾರ್ ಶೆಟ್ಟಿ   ಇದೀಗ ಕಾಂಗ್ರೆಸ್ ಸೇರಿದ್ದಾರೆ.ಕಾಂಗ್ರೆಸ್ ಗೆ ಬಿಜೆಪಿ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಸೇರ್ಪಡೆ sukumar-shetty sukumar shetty

ಈ ಕುರಿತು ಮಾತನಾಡಿದ ಸುಕುಮಾರ್ ಶೆಟ್ಟಿ, ಬೆಳೆಯುವವರನ್ನು ಭಾರತೀಯ ಜನತಾ ಪಕ್ಷದಲ್ಲಿ ಬಿಡುವುದಿಲ್ಲ, ಕಾಲೆಳೆದು ಮಲಗಿಸುವ ಕೆಲಸ ಬಿಜೆಪಿಯ ಪರಿಪಾಠವಾಗಿದೆ. ಕಳೆದ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡದೆ ಅನ್ಯಾಯ ಮಾಡಿದ್ದಾರೆ. ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಕಾಂಗ್ರೆಸ್ ಸೇಡುತ್ತಿದ್ದೇನೆ ಎಂದರು.

Key words: Former BJP MLA -Sukumar Shetty- joins- Congress.