ಬೆಂಗಳೂರು,ಫೆಬ್ರವರಿ,3,2026 (www.justkannada.in): ಅಮೆರಿಕಾ ಅಧ್ಯಕ್ಷ್ಯ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ನಡೆದ ಎರಡು ರಾಷ್ಟ್ರಗಳ ಒಪ್ಪಂದ ಎರಡೂ ದೇಶಗಳ ನಡುವೆ ಸಹಕಾರ ಸಂಬಂಧ ವೃದ್ಧಿಗೆ ಮಹತ್ವದ ಮೈಲುಗಲ್ಲು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ನುಡಿದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, ಈ ಮಹತ್ವದ ಸಾಧನೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವವರ ನಾಯಕತ್ವಕ್ಕೆ ಮತ್ತು ಅವರ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಎರಡು ರಾಷ್ಟ್ರಗಳ ನಡುವಿನ ಈ ಒಪ್ಪಂದ ರೈತರು, ನವೋದ್ಯಮಿಗಳಿಗೆ, ಕೌಶಲ್ಯ ಹೊಂದಿರುವ ಕಾರ್ಮಿಕರು, ಸಣ್ಣ ಕೈಗಾರಿಕೆಗಳು ವಿಶ್ವ ಮಟ್ಟದಲ್ಲಿ ತಂತ್ರಜ್ಞಾನ, ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಲು ಹೊಸ ಅವಕಾಶಗಳನ್ನು ಒದಗಿಸಲಿದೆ ಎಂದು ಹೇಳಿದ್ದಾರೆ.
ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸದೃಢ ನಾಯಕತ್ವ ವಿಶ್ವಮಟ್ಟದಲ್ಲಿ ಭಾರತದ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಅವರ ಸಾಮರ್ಥ್ಯವನ್ನು ಬಳಸಿಕೊಂಡು ವಿಶ್ವ ಮಟ್ಟದಲ್ಲಿ ಭಾರತದ ಅಭಿವೃದ್ಧಿಗೆ ಪೂರಕವಾಗಿ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಪ್ರಧಾನಿಯವರು ಯಶಸ್ವಿಯಾಗಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
Key words: PM Modi, Trump, agreement, Former CM, Bommai







