Wednesday, August 19, 2026

BDA Apartments

Home Front Page ಇತರೇ ರೋಗಿಗಳಿಗೆ ತೊಂದರೆಯಾಗುತ್ತೆ: ನೀವ್ಯಾರು ಆಸ್ಪತ್ರೆಗೆ ಬರಬೇಡಿ- ಕಾರ್ಯಕರ್ತರಿಗೆ ಮನವಿ ಮಾಡಿದ ಮಾಜಿ ಸಿಎಂ ಬೊಮ್ಮಾಯಿ.

ಇತರೇ ರೋಗಿಗಳಿಗೆ ತೊಂದರೆಯಾಗುತ್ತೆ: ನೀವ್ಯಾರು ಆಸ್ಪತ್ರೆಗೆ ಬರಬೇಡಿ- ಕಾರ್ಯಕರ್ತರಿಗೆ ಮನವಿ ಮಾಡಿದ ಮಾಜಿ ಸಿಎಂ ಬೊಮ್ಮಾಯಿ.

ಬೆಂಗಳೂರು,ಅಕ್ಟೋಬರ್,17,2023(www.justkannada.in): ಮೊಣಕಾಲು ನೋವಿನಿಂದ ಬಳಲುತ್ತಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಈ ಸಂಬಂಧ ತಮ್ಮ ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಆಸ್ಪತ್ರೆಗೆ ಬಾರದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಟ್ವೀಟ್ ಮಾಡಿರುವ ಅವರು,  ಆತ್ಮೀಯರೇ, ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ.

ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ. ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು ಎಂದು ತಿಳಿಸಿದ್ದಾರೆ.

Key words: former CM -Bommai – hospital- appealed – activists.