ಸಿಎಂ ಬದಲಾವಣೆ ವದಂತಿಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಬಿಎಸ್ ವೈ.

ಬೆಂಗಳೂರು,ಆಗಸ್ಟ್,10,2022(www.justkannada.in): ಸಿಎಂ ಬದಲಾವಣೆ ಬಗ್ಗೆ ರಾಜ್ಯ ಕಾಂಗ್ರೆಸ್ ಮಾಡಿದ್ಧ ಟ್ವಿಟ್ ಭಾರಿ ಚರ್ಚೆಯಾಗಿದ್ದು ಈ ವಿಚಾರದ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿಎಸ್ ವೈ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ನಾಯಕತ್ವ ಬದಲಾವಣೆ ಅನ್ನೋದು ವದಂತಿ. ಸಿಎಂ ಬೊಮ್ಮಾಯಿ ಅಧಿಕಾರ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

ಹಾಗೆಯೇ ಯಾವ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಬಿಎಸ್ ವೈ, ನಳೀನ್ ಕುಮಾರ್ ಕಟೀಲ್ ಬದಲಾವಣೆ ಆದರೂ ಆಗಬಹುದು.  ಈ ಬಗ್ಗೆ ಹೈಕಮಾಂಡ್, ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.

Key words: Former CM- BS Yeddyurappa- clarified -CM -change- rumours.