ಮಾಜಿ ಸಿಎಂ ಬಿಎಸ್ ವೈ ಭೇಟಿಯಾಗಿ ಹೊಸ ವರ್ಷದ ಶುಭಕೋರಿದ ಸಿಎಂ ಬೊಮ್ಮಾಯಿ.

ಬೆಂಗಳೂರು,ಜನವರಿ,1,2022(www.justkannada.in):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಹೊಸವರ್ಷದ ಶುಭಾಶಯ ತಿಳಿಸಿದರು.

ಕಾವೇರಿ ನಿವಾಸದಲ್ಲಿ ಮಾಜಿ ಸಿಎಂ  ಬಿ.ಎಸ್.ಯಡಿಯೂರಪ್ಪ ಅವರನ್ನು  ಸಿಎಂ ಬೊಮ್ಮಾಯಿ ಭೇಟಿಯಾಗಿ ಶುಭಕೋರಿದರು. ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ 2022ರ ಹೊಸ ವರ್ಷದ ಹೃತ್ಪೂರ್ವಕ ಶುಭಾಶಯಗಳು. ನವ ವರ್ಷ ಎಲ್ಲರಿಗೂ ಸುಖ – ಸಂತಸಗಳನ್ನು ಹೊತ್ತು ತರಲಿ. ಜನರ ಆರೋಗ್ಯದ ದೃಷ್ಟಿಯಿಂದ ಬಹಿರಂಗ ಸಂಭ್ರಮಾಚರಣೆಗಳಿಂದ ದೂರವಿದ್ದು, ಸಾಂಕ್ರಾಮಿಕದ ಸವಾಲುಗಳನ್ನು ನಾವೆಲ್ಲರೂ ಕೂಡಿ ಎದುರಿಸೋಣ. ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ ಕೊರೊನಾ ಮಣಿಸೋಣ ಎಂದು ಶುಭಾಶಯ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹೊಸ ವರ್ಷದ ಅಂಗವಾಗಿ ವೈಯಾಲಿಕಾವಲ್ ಬಡಾವಣೆಯಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಮುನಿರತ್ನ ಟಿಟಿಡಿ ನಿರ್ದೇಶಕ ಶಶಿಧರ ಉಪಸ್ಥಿತರಿದ್ದರು.

Key words: Former CM -BS Yeddyurappa- CM Bommai-wishes