ಮಳೆ ಹಾನಿ ಕುರಿತು ವಿಪಕ್ಷಗಳ ಟೀಕೆಗೆ ಮಾಜಿ ಸಿಎಂ ಬಿಎಸ್ ವೈ ತಿರುಗೇಟು.

ಶಿವಮೊಗ್ಗ,ನವೆಂಬರ್,25,2021(www.justkannada.in):  ಮಳೆಹಾನಿ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಟೀಕೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿರುವ ಬಿಎಸ್ ವೈ, ಮನೆಗಳಲ್ಲಿ ಕುಳಿತು ವಿಪಕ್ಷನಾಯಕರು ಟೀಕಿಸುತ್ತಿದ್ದಾರೆ. ಎಲ್ಲಾ ಸಚಿವರು ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ. ವಿಪಕ್ಷಗಳ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ  ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ 500 ರಿಂದ 600 ಕೋಟಿ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ. ರೈತರು ಸಂಕಷ್ಟದಲ್ಲಿದ್ದಾರೆ. ಹೆಚ್ಚಿನ ಪರಿಹಾರದ ಅಗತ್ಯವಿದೆ. ಸಿಎಂ ಜತೆ ಚರ್ಚಿಸಿ ಪರಿಹಾರ ಕೊಡಿಸಲು ಯತ್ನಿಸುವೆ  ಎಂದರು.

ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ಎಸಿಬಿ ಭ್ರಷ್ಟ ಅಧಿಕಾರಿಗಳ ವಿರುದ್ಧ ತನಿಖೆ ಮಾಡುತ್ತಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ ಎಂದರು.

Key words: Former CM- BS yeddyurappa- criticize- opposition – rain damage.