Sunday, September 20, 2026

BDA Apartments

ವಿಧಾನಸೌಧಕ್ಕೆ ತೆರಳುವ ಮುನ್ನ ದೇವರ ಮೊರೆ ಹೋದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ...
Home Front Page ವಿಧಾನಸೌಧಕ್ಕೆ ತೆರಳುವ ಮುನ್ನ ದೇವರ ಮೊರೆ ಹೋದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

ವಿಧಾನಸೌಧಕ್ಕೆ ತೆರಳುವ ಮುನ್ನ ದೇವರ ಮೊರೆ ಹೋದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

ಬೆಂಗಳೂರು,ಜು,22,2019(www.justkannada.in):  ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ವಿಶ್ವಾಸ ಮತಯಾಚನೆ ಹಿನ್ನೆಲೆ  ಬಿಎಸ್ ಯಡಿಯೂರಪ್ಪ ವಿಧಾನಸೌಧಕ್ಕೆ ತೆರಳುವ ಮುನ್ನ ದೇವರ ಮೊರೆ ಹೋಗಿದ್ದಾರೆ.

ನಗರದ ರಾಜನಕುಂಟೆಯ ರಮಡಾ ಹೋಟೆಲ್ ನಲ್ಲಿ ತಂಗಿದ್ದ ಬಿಜೆಪಿ ಶಾಸಕರು ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಹೋಟೆಲ್ ನಿಂದ ವಿಧಾನಸೌಧಕ್ಕೆ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಬಿಎಸ್ ಯಡಿಯೂರಪ್ಪ ಮಾರ್ಗ ಮಧ್ಯೆ ಅಂಜನೇಯ ದೇವಸ್ಥಾನದಲ್ಲಿ ಭಕ್ತಿ ಅರ್ಪಿಸಿದ  ಬಸ್ ನಲ್ಲೇ ಮಂಗಳಾರತಿ ಪಡೆದು, ಪ್ರಸಾದ ಸ್ವೀಕರಿಸಿದರು.

ಇನ್ನು ಅವರ ಡಾಲರ್ಸ್ ಕಾಲೋನಿಯಲ್ಲಿರುವ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿಯೂ ಸಹ 6 ಅರ್ಚಕರಿಂದ ವಿಶೇಷ ಪೂಜೆ ಸಲ್ಲಿಸಲಾಗಿದೆ.

Key words: Former CM -BS Yeddyurappa-God -vidhansoudha