Tuesday, August 11, 2026

BDA Apartments

Home Front Page ಸದನದಲ್ಲಿ ಬಿಎಸ್ ವೈ ಮಾಡಿದ ವಿದಾಯ ಭಾಷಣದ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ...

ಸದನದಲ್ಲಿ ಬಿಎಸ್ ವೈ ಮಾಡಿದ ವಿದಾಯ ಭಾಷಣದ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ.

ಬೆಂಗಳೂರು,ಫೆಬ್ರವರಿ,24,2023(www.justkannada.in):  ನಿನ್ನೆ ವಿಧಾನಸಭೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾಡಿದ ವಿದಾಯದ ಭಾಷಣದ ಬಗ್ಗೆ ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವಿಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ  ನರೇಂದ್ರ ಮೋದಿ, ಬಿಜೆಪಿ ಕಾರ್ಯಕರ್ತನಾದ ನನಗೆ ಈ ಭಾಷಣ ಸ್ಪೂರ್ತಿ.  ಇದರಲ್ಲಿ ನಮ್ಮ ಪಕ್ಷದ ನೈತಿಕತೆಯೂ ಅಡಗಿದೆ. ಈ ಭಾಷಣ ಖಂಡಿವಾಗಿ ಕಾರ್ಯಕರ್ತರಿಗೆ ಸ್ಪೂರ್ತಿಯಾಗಲಿದೆ ಎಂದು ತಿಳಿಸಿದ್ದಾರೆ.

ನಿನ್ನೆ ಸದನದಲ್ಲಿ ಭಾವುಕರಾಗಿ ಮಾತನಾಡಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನನಗೆ ಇದೇ ಕೊನೆ ಅಧಿವೇಶನ. ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಇನ್ಮುಂದೆ ಸದನಕ್ಕೆ ಬರುವುದಿಲ್ಲ. ನನಗೆ ಪ್ರಧಾನಿ ಮೋದಿ ಎಲ್ಲಾ ರೀತಿಯ ಅವಕಾಶ ನೀಡಿದ್ದಕ್ಕೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದರು.

Key words: Former CM-BS yeddyurappa-PM –Modi-tweet