ನಿರಾಣಿ ಮುಂದಿನ ಸಿಎಂ ಎಂಬ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ರಿಯಾಕ್ಷನ್ ಹೀಗಿತ್ತು.

ದಾವಣಗೆರೆ,ನವೆಂಬರ್,29,2021(www.justkannada.in):   ಸಚಿವ ಮುರುಗೇಶ್ ನಿರಾಣಿ ಮುಂದಿನ ಸಿಎಂ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ,  ಅದನ್ನ ತಮಾಷೆಗಾಗಿ ಹೇಳಿದ್ದೇನೆಂದು ಈಶ್ವರಪ್ಪ ಅವರೇ ಹೇಳಿದ್ದಾರೆ ಎಂದರು.

ಮಾದ್ಯಮಗಳ ಜತೆ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 140 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿಯನ್ನ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ. ಈಗ ವಿಧಾನ ಪರಿಷತ್ ನ 25 ಸ್ಥಾನಗಳಲ್ಲಿ ಬಿಜೆಪಿ 20 ಸ್ಥಾನದಲ್ಲಿ ಸ್ಪರ್ಧಿಸಿದೆ. 15ಕ್ಕೂ ಹೆಚ್ಚು ಸ್ಥಾನದಲ್ಲಿ ನಾವು ಗೆಲುವು ಸಾಧಿಸುತ್ತೇವೆ. ಈ ಮೂಲಕ ಬಹುಮತ ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 ಈಶ್ವರಪ್ಪ ಹೇಳಿಕೆಗೆ ನಾನು ಋಣಿಯಾಗಿರುತ್ತೇನೆ-ಮುರುಗೇಶ್ ನಿರಾಣಿ

ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ಕುರಿತು ಬಾಗಲಕೋಟೆಯಲ್ಲಿ ಮಾತನಾಡಿರುವ ಸಚಿವ ಮುರುಗೇಶ್ ನಿರಾಣಿ,  ಕೆ.ಎಸ್ ಈಶ್ವರಪ್ಪ ನವರು ಅಭಿಮಾನ ಪೂರ್ವಕವಾಗಿ ‘ಮುರುಗೇಶ ನಿರಾಣಿ‌ ಮುಖ್ಯಮಂತ್ರಿಯಾಗುತ್ತಾರೆ’ ಎಂಬ ಮಾತನ್ನು ಹೇಳಿರಬಹುದು.ಅವರು ಹೇಳಿದ್ದಕ್ಕೆ ನಾನು ಋಣಿಯಾಗಿರುತ್ತೇನೆ ಎಂದು ಹೇಳಿದರು.

Key words: Former CM BS Yeddyurappa- Reaction – Minister -KS Eshwarappa’s- statement -Nirani – next CM.